ಬೆಂಗಳೂರು: ಚುನಾವಣೆ ಕೆಲಸಗಳಿಗೆ ನಿಯೋಜಿಸಿರುವ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಸಂಭಾವನೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಮುಖ್ಯ ಚುನಾವಣಾಧಿಕಾರಿಗೆ ಆಗ್ರಹಿಸಿದೆ.

ಈ ಬಗ್ಗೆ ಸಂಘದ ರಾಜ್ಯಾಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಅವರು ಮುಖ್ಯ ಚುನಾವಣೆ ಅಧಿಕಾರಿಗೆ ಪತ್ರ ಬರೆದಿದ್ದಾರೆ.

‘ಆಶಾ ಕಾರ್ಯಕರ್ತೆಯರನ್ನು ವಿವಿಧ ಜಿಲ್ಲೆಗಳ ಮತದಾನ ಕೇಂದ್ರಗಳಲ್ಲಿ ಆರೋಗ್ಯ ಸಹಾಯಕರನ್ನಾಗಿ ನೇಮಿಸಿಕೊಳ್ಳಲಾಗಿದೆ. ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಕರ್ತವ್ಯ ನಿರ್ವಹಿಸಲು ಜಿಲ್ಲಾ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇವರು ಮತಕೇಂದ್ರಕ್ಕೆ ಬರುವ ಮತದಾರರಿಗೆ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಲ್ಲಿ ಓಆರ್‌ಎಸ್ ಒದಗಿಸಿಸುವುದು ಸೇರಿ ವಿವಿಧ ಸಹಾಯ ಮಾಡಬೇಕೆಂದು ತಿಳಿಸಲಾಗಿದೆ. ಆಶಾ ಕಾರ್ಯಕರ್ತೆಯರು ಸೇವಾನೆಲೆಗಟ್ಟಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರೋತ್ಸಾಹಧನ ಮಾದರಿ ಕಡಿಮೆ ಗೌರವಧನಕ್ಕೆ ಕೆಲಸ ಮಾಡುತ್ತಿದ್ದಾರೆ’ ಎಂದು ಡಿ. ನಾಗಲಕ್ಷ್ಮಿ ಹೇಳಿದ್ದಾರೆ.

‘ಈ ಹಿಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಕೆಲಸಗಳಿಗೆ ಆಶಾ ಕಾರ್ಯಕರ್ತೆಯರಿಗೆ ₹ 700 ಸಂಭಾವನೆ ನೀಡಲಾಗಿದೆ. ಆಶಾ ಕಾರ್ಯಕರ್ತೆಯರಿಗೆ ನಿಗದಿಪಡಿಸಿದ ಕೆಲಸಗಳನ್ನು ಹೊರತುಪಡಿಸಿ ಯಾವುದೇ ಕೆಲಸಕ್ಕೆ ನಿಯೋಜಿಸಿದಲ್ಲಿ ಜಿಲ್ಲಾಡಳಿತ ಸೂಕ್ತ ಸಂಭಾವನೆ ನೀಡತಕ್ಕದ್ದು ಎಂದು ಆರೋಗ್ಯ ಇಲಾಖೆಯ ಆದೇಶಿಸಿದೆ. ಆದ್ದರಿಂದ ವಿಧಾನಸಭೆ ಚುನಾವಣಾ ಕೆಲಸಗಳಿಗೆ ನಿಯೋಜಿಸುವ ಆಶಾ ಕಾರ್ಯಕರ್ತೆಯರಿಗೆ ಊಟ-ತಿಂಡಿಯ ಜತೆಗೆ ಸೂಕ್ತ ಸಂಭಾವನೆ ನೀಡಬೇಕು. ಈ ಬಗ್ಗೆ ಆದೇಶಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.