ಶಿರ್ವ: ‘ಸರಳ ಸಜ್ಜನಿಕೆಯ ಸಾಕಾರಮೂರ್ತಿ ಆಗಿರುವ ಸುರೇಶ್ ಶೆಟ್ಟಿ ಕಾಪು ಕ್ಷೇತ್ರದಲ್ಲಿ ದಾನಶೂರ ಕರ್ಣನಾಗಿ ದೀನ ದಲಿತರ ಕಣ್ಣೀರು ಒರೆಸುವ ಕೆಲಸ ಮಾಡಿದ್ದಾರೆ. ಸಾತ್ವಿಕ ಚಿಂತನೆ, ಪ್ರಾಮಾಣಿಕ ಸೇವೆ ಮಾಡುವ ಅವರನ್ನು ಬೆಂಬಲಿಸಬೇಕು’ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮನವಿ ಮಾಡಿದರು.

ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮಜೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸಿದರು.

ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ‘ನಾನು ಅಧಿಕಾರದಲ್ಲಿದ್ದಾಗ ಮಾಡಿದ ನಿಸ್ವಾರ್ಥ ಸೇವೆ, ಕ್ಷೇತ್ರದ ಮುಂದಿನ ಅಭಿವೃದ್ಧಿ ಕೆಲಸಗಳ ಜವಾಬ್ದಾರಿಯನ್ನು ಗುರ್ಮೆ ಸುರೇಶ್ ಶೆಟ್ಟಿ ನಿಭಾಯಿಸಿಕೊಂಡು ಹೋಗಲಿದ್ದಾರೆ’ ಎಂದು ಭರವಸೆ ನೀಡಿದರು.

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ‘ಕಾಪು ಕ್ಷೇತ್ರದ ಜನರ ಸೇವೆ ಮಾಡುವ ಅವಕಾಶ ಭಗವಂತ ನನಗೆ ಕಲ್ಪಿಸಿಕೊಟ್ಟಿದ್ದಾನೆ. ಕ್ಷೇತ್ರದ ಮತದಾರರು ಶಾಸಕನಾಗಿ ಆಯ್ಕೆ ಮಾಡಿದಲ್ಲಿ ಎಲ್ಲಾ ವರ್ಗದ ಏಳಿಗೆ ಶ್ರಮಿಸುತ್ತೇನೆ’ ಎಂದರು.

ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸುಲೋಚನಾ ಭಟ್ ಬಂಟ್ವಾಳ, ಪುರಸಭಾ ಸದಸ್ಯೆ ಹರಿಣಿ, ಅನುಸೂಯ ಕಾಂಪ್ಲೆಕ್ಸ್ ಅಧ್ಯಕ್ಷೆ ಡಾ. ಶ್ವೇತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.