ಮಸ್ಕಿ (ರಾಯಚೂರು): ಪಟ್ಟಣದಲ್ಲಿ ಏಪ್ರಿಲ್ 28 ರಂದು ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಲನಚಿತ್ರ ನಟಿ ಉಮಾಶ್ರೀ ಅವರು ತಮ್ಮ ಭಾಷಣದಲ್ಲಿ ಬಳಸಿದ್ದ ಪದಗಳಿಗೆ ಸಂಬಂಧಿಸಿ ಅವರ ವಿರುದ್ಧ ಶಂಕರಲಿಂಗ ಎನ್ನುವವರು ನೀಡಿದ್ದ ದೂರು ಆಧರಿಸಿ ಮಸ್ಕಿ ಠಾಣೆ ಪೊಲೀಸರು ಬುಧವಾರ ಪ್ರಥಮ ತನಿಖಾ ವರದಿ (ಎಫ್‌ಐಆರ್) ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

‘ಬಿಜೆಪಿ ನಾಯಕರು ವಿಷಜಂತುಗಳು ಮತ್ತು ಕೋಮುವಾದವನ್ನು ಸೃಷ್ಟಿಸಿ ಬೆಂಕಿ ಹಚ್ಚುವವರು’ ಎಂದು ಉಮಾಶ್ರೀ ಅವರು ಮಾತನಾಡಿದ್ದರು. ಇಂಥ ಭಾಷಣದಿಂದ ಸಮಾಜದಲ್ಲಿ ಭಯದ ವಾತಾವರಣ ಮತ್ತು ಸಾರ್ವಜನಿಕ ಜೀವನದಲ್ಲಿ ನೆಮ್ಮದಿ ಹಾಳು ಮಾಡುವ ಪರಿಸ್ಥಿತಿ ನಿರ್ಮಾಣವಾಗಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಕಾನೂನು ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಕೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.