ಹೊಸಕೋಟೆ: ಹೊಸಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ಎಂಟಿಬಿ ನಾಗರಾಜ್ ಸೋಮವಾರ ಅಪಾರ ಸಂಖ್ಯೆಯ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಮರವಣಿಗೆಯಲ್ಲಿ ಹೊರಟು, ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಆಸ್ತಿ ಹೆಚ್ಚಳ: ₹1510 ಕೋಟಿ ಆಸ್ತಿಯನ್ನು ಎಂಟಿಬಿ ನಾಗರಾಜ್ ಘೋಷಣೆ ಮಾಡಿದ್ದಾರೆ. ಕಳೆದ 2019ರ ವಿಧಾನಸಭೆ ಉಪ ಚುನಾವಣೆಯಲ್ಲಿ ₹1015 ಕೋಟಿ ಘೋಷಣೆ ಮಾಡಿದ್ದರು. ಕಳೆದ ನಾಲ್ಕು ವರ್ಷದಲ್ಲಿ ₹495 ಕೋಟಿ ಹೆಚ್ಚಳವಾಗಿರುವುದು ಅವರ ಆಸ್ತಿ ವಿವರ ಮೂಲಕ ತಿಳಿದು ಬಂದಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಆವಿಮುಕ್ತೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಅಪಾರ ಸಂಖ್ಯೆಯ ಕಾರ್ಯಕರ್ತರು ಡಿಜೆ ಸದ್ದಿನೊಂದಿಗೆ ಹೆಜ್ಜೆ ಹಾಕಿದರು.

ಇದೇ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸಿ ಹೊರಬರುತ್ತಿದ್ದ ಶಾಸಕ ಶರತ್ ಬಚ್ಚೇಗೌಡ ಬೆಂಬಲಿಗರಿಗೆ ಎಂಟಿಬಿ ನಾಗರಾಜ್ ಬೆಂಬಲಿಗರು ಮುಖಾಮುಖಿಯಾದರು. ಉಭಯ ಪಕ್ಷಗಳ ಕಾರ್ಯಕರ್ತರು ತಮ್ಮ ನಾಯಕರ ಪರ ಪರಸ್ಪರ ಘೋಷಣೆ ಕೂಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.