ವಿಧಾನ ಪರಿಷತ್ನ ಪದವೀಧರರು ಮತ್ತು ಶಿಕ್ಷಕರ ಆರು ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದೆ. ಮೈಸೂರು, ಬೆಂಗಳೂರು ಮತ್ತು ಕಲಬುರಗಿಯಲ್ಲಿ ಮತ ಎಣಿಕೆ ನಡೆಯುತ್ತಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರರ ಕ್ಷೇತ್ರಗಳ ಮತ ಎಣಿಕೆ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ನಡೆಯುತ್ತಿದೆ. ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆಯುತ್ತಿದೆ. ಈಶಾನ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಕಲಬುರಗಿ ನಗರದ ಗುಲ್ಬರ್ಗ ವಿಶ್ವವಿದ್ಯಾಲಯದ ಹೇಮರೆಡ್ಡಿ ಮಲ್ಲಮ್ಮ ಕಟ್ಟಡದಲ್ಲಿ ಆರಂಭವಾಗಿದೆ.

ವಿಧಾನಪರಿಷತ್ ದಕ್ಷಿಣ ಶಿಕ್ಷಕರ, ನೈರುತ್ಯ ಪದವೀಧರರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಿಗ್ಗೆ ಇಲ್ಲಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಆರಂಭಗೊಂಡಿದೆ.

ಮತಪೆಟ್ಟಿಗೆಗಳನ್ನು ಇಟ್ಟಿರುವ ಭದ್ರತಾ ಕೊಠಡಿಗಳನ್ನು ಚುನಾವಣಾ ಅಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ಜಿ.ಸಿ. ಪ್ರಕಾಶ್ ಹಾಗೂ ಚುನಾವಣೆ ವೀಕ್ಷಕ ರವಿಶಂಕರ್ ಜೆ. ಅವರ ಸಮ್ಮುಖದಲ್ಲಿ ತೆರೆಯಲಾಯಿತು.

ಮತಪತ್ರಗಳನ್ನು ತಲಾ 25ರ ಬಂಡಲ್ಗಳನ್ನು ಮಾಡುವ ಕಾರ್ಯ ಮೊದಲಿಗೆ ನಡೆಯಲಿದೆ. ನಂತರ ಎಣಿಕೆ ಪ್ರಕ್ರಿಯೆ ಆರಂಭಗೊಳ್ಳುತ್ತದೆ. ಪ್ರಾಶಸ್ತ್ಯದ ಮತದಾನ ಆಗಿರುವುದರಿಂದ ಎಣಿಕೆ ಕಾರ್ಯಕ್ಕೆ ಸಾಕಷ್ಟು ಸಮಯ ಬೇಕಾಗುತ್ತದೆ.

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 11 ಮಂದಿ ಕಣದಲ್ಲಿದ್ದಾರೆ. ಮರಿತಿಬ್ಬೇಗೌಡ ಈ ಬಾರಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದು, 5ನೇ ಬಾರಿ ಆಯ್ಕೆ ಬಯಸಿದ್ದಾರೆ. ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕೆ.ವಿವೇಕಾನಂದ ಇದೇ ಮೊದಲಿಗೆ ಸ್ಪರ್ಧಿಸಿದ್ದಾರೆ. ಇವರಲ್ಲದೇ, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ಸೇರಿ ಒಂಬತ್ತು ಮಂದಿ ಸ್ಪರ್ಧಿಸಿದ್ದಾರೆ. ಮತದಾರರ ಒಲವು ಯಾರಿಗೆ ವ್ಯಕ್ತವಾಗಿದೆ ಎಂಬುದು ಮತ ಎಣಿಕೆ ನಂತರ ತಿಳಿದುಬರಲಿದೆ.

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಸಾಧ್ವಿ ಹೇಮರಡ್ಡಿ ಮಲ್ಲಮ್ಮ ಅಧ್ಯಯನ ಪೀಠದ ಸಭಾಂಗಣದಲ್ಲಿ ನಡೆಯುತ್ತಿದೆ.

ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ ನೇತೃತ್ವದಲ್ಲಿ ಸ್ಟ್ರಾಂಗ್ ರೂಮ್ ತೆರೆಯಲಾಯಿತು.

14 ಮತ ಎಣಿಕೆ ಟೇಬಲ್ ಗಳನ್ನು ಅಳವಡಿಸಲಾಗಿದೆ.

ಕಾಂಗ್ರೆಸ್ ನಿಂದ ಚಂದ್ರಶೇಖರ ಪಾಟೀಲ ಹುಮನಾಬಾದ್, ಬಿಜೆಪಿಯಿಂದ ಅಮರನಾಥ ಪಾಟೀಲ, ಪಕ್ಷೇತರ ಅಭ್ಯರ್ಥಿ ಎನ್. ಪ್ರತಾಪರೆಡ್ಡಿ ಸೇರಿದಂತೆ 19 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಗುಲಬರ್ಗಾ ವಿಶ್ವವಿದ್ಯಾಲಯದ ಸಾಧ್ವಿ ಹೇಮತಡ್ಡಿ ಮಲ್ಲಮ್ಮ ಅಧ್ಯಯನ ಪೀಠದ ಆವರಣದಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆಯನ್ನು ಸಹಾಯಕ ಚುನಾವಣಾಧಿಕಾರಿ ಫೌಜಿಯಾ ತರನ್ನುಮ್ ಪರಿಶೀಲಿಸಿದರು

ಮತ ಎಣಿಕೆ ಕೇಂದ್ರದಲ್ಲಿ ಕಾಯ್ದು ಕುಳಿತ ಅಭ್ಯರ್ಥಿಗಳು

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಮತ ಎಣಿಕೆಗೆ ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಸಿದ್ಧತೆ ನಡೆದಿದ್ದು, ವಿವಿಧ ಜಿಲ್ಲೆಗಳ ಮತ ಪೆಟ್ಟಿಗೆಗಳನ್ನು ತೆರೆಯುವ ಕಾರ್ಯ ಪ್ರಗತಿಯಲ್ಲಿದೆ.

ಮತ ಎಣಿಕೆ ಯಾವಾಗ ನಡೆಯಲಿದೆ ಎಂಬ ನಿರೀಕ್ಷೆಯಲ್ಲಿ ಪಕ್ಷೇತರ ಅಭ್ಯರ್ಥಿಗಳಾದ ಎನ್. ಪ್ರತಾಪ್ ರೆಡ್ಡಿ, ಶರಣು ಐ.ಟಿ. ಅವರು ಮತ ಎಣಿಕೆ ಕೇಂದ್ರದಲ್ಲಿ ಕಾಯ್ದು ಕುಳಿತಿದ್ದಾರೆ.

ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಅವರು ಮತ ಎಣಿಕೆ ಕೇಂದ್ರದ ಬಳಿ ಬಂದು ವೀಕ್ಷಿಸಿದರು.

ದಕ್ಷಿಣ ಶಿಕ್ಷಕರ ಕ್ಷೇತ್ರ: ಜೆಡಿಎಸ್ ಅಭ್ಯರ್ಥಿ ಕೆ.ವಿವೇಕಾನಂದ ಮುನ್ನಡೆ

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ವಿವೇಕಾನಂದ ಅವರು ಮುನ್ನಡೆ ಸಾಧಿಸಿದ್ದಾರೆ.

ಮೊದಲ ಸುತ್ತಿನ ಎಣಿಕೆ ಮುಕ್ತಾಯವಾಗಿದ್ದು,ಜೆಡಿಎಸ್ ಅಭ್ಯರ್ಥಿ ವಿವೇಕಾನಂದ ಅವರಿಗೆ 1,396 ಮತಗಳ ಮುನ್ನಡೆ ಪಡೆದಿದ್ದಾರೆ. ಅವರು, 3,686 ಮತಗಳನ್ನು ಗಳಿಸಿದ್ದಾರೆ.

ಕಾಂಗ್ರೆಸ್ನ ಮರಿತಿಬ್ಬೇಗೌಡ ಅವರಿಗೆ 2,290 ಮತಗಳು ದೊರೆತಿವೆ. ಮೊದಲ ಸುತ್ತಿನಲ್ಲಿ 7,000 ಮತಗಳನ್ನು ಎಣಿಕೆ ಮಾಡಲಾಗಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪ್ರಗತಿಯಲ್ಲಿದ್ದು, ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಆರಂಭಿಕ ಮುನ್ನಡೆ ಗಳಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರು ಹಿನ್ನಡೆ ಅನುಭವಿಸಿದ್ದಾರೆ.

ಬೆಂಗಳೂರು: ಅಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಸರ್ಕಾರಿ ಕಲಾ ಕಾಲೇಜಿನಲ್ಲಿ ಮಧ್ಯಾಹ್ನದ ನಂತರ ಆರಂಭವಾಗಿದೆ.

ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಭೋಜೇಗೌಡಗೆ 1642 ಮತಗಳ ಮುನ್ನಡೆ

ಮೈಸೂರು: ವಿಧಾನಪರಿಷತ್ ನೈರು ಶಿಕ್ಷಕರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮುಕ್ತಾಯದ ವೇಳೆಗೆ ಜೆಡಿಎಸ್ನ ಎಸ್.ಎಲ್. ಭೋಜೇಗೌಡ 1,642 ಮತಗಳಿಂದ ಮುನ್ನಡೆ ಗಳಿಸಿದ್ದಾರೆ.

ಅವರು 3,309 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ನ ಕೆ.ಕೆ. ಮಂಜುನಾಥ್ಕುಮಾರ್ 1,667

ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಹರೀಶ್ ಆಚಾರ್ಯ 708 ಮತಗಳನ್ನು ಪಡೆದಿದ್ದಾರೆ.

ಈ ಸುತ್ತಿನಲ್ಲಿ 288 ಮತಗಳು ಕುಲಗೆಟ್ಟ ಮತಗಳಾಗಿವೆ ಎಂದು ಚುನಾವಣಾಧಿಕಾರಿ ಜಿ.ಸಿ. ಪ್ರಕಾಶ್ ತಿಳಿಸಿದ್ದಾರೆ

ಮೈಸೂರು: ವಿಧಾನಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮುಕ್ತಾಯದ ವೇಳೆಗೆ ಜೆಡಿಎಸ್ನ ಕೆ.ವಿವೇಕಾನಂದ 1,278 ಮತಗಳಿಂದ ಮುನ್ನಡೆ ಗಳಿಸಿದ್ದಾರೆ.

ಅವರು 3757 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ನ ಮರಿತಿಬ್ಬೇಗೌಡ 2,479 ಮತಗಳನ್ನು ಪಡೆದಿದ್ದಾರೆ.

ಮೊದಲ ಸುತ್ತಿನಲ್ಲಿ 7000 ಮತಗಳ ಎಣಿಕೆ ನಡೆದಿದೆ. ಮಾಜಿ ಶಾಸಕ 36, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ 11 ಮತಗಳನ್ನಷ್ಟೆ ಪಡೆದಿದ್ದಾರೆ. ನಿವೃತ್ತ ಡಿಡಿಪಿಯು ನಾಗಮಲ್ಲೇಶ್ 165 ಹಾಗೂ ಹ.ರ.ಮಹೇಶ್ 114 ಮತಗಳನ್ನು ಗಳಿಸಿ ಗಮನಸೆಳೆದಿದ್ದಾರೆ.

ಈ ಸುತ್ತಿನಲ್ಲಿ 401 ಮತಗಳು ಕುಲಗೆಟ್ಟ ಮತಗಳಾಗಿವೆ ಎಂದು ಚುನಾವಣಾಧಿಕಾರಿ ಜಿ.ಸಿ. ಪ್ರಕಾಶ್ ತಿಳಿಸಿದ್ದಾರೆ

ಆಗ್ನೇಯ ಶಿಕ್ಷಕರ ಕ್ಷೇತ್ರ: ಕಾಂಗ್ರೆಸ್ನ ಶ್ರೀನಿವಾಸ್ಗೆ ಮುನ್ನಡೆ

ಬೆಂಗಳೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಕಾಂಗ್ರೆಸ್ನ ಡಿ.ಟಿ. ಶ್ರೀನಿವಾಸ್ 317 ಮತಗಳ ಮುನ್ನಡೆ ಪಡೆದಿದ್ದಾರೆ.

ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಎರಡನೇ ಸ್ಥಾನದಲ್ಲಿ ಇದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿಯ ಕಿಶನ್ ಎಂ.ಜಿ ಹಾಗೂ ಪಕ್ಷೇತರರು ಸೇರಿ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ

ಮೈಸೂರು: ವಿಧಾನಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, 2ನೇ ಸುತ್ತಿನ ಮುಕ್ತಾಯದ ವೇಳೆಗೆ ಜೆಡಿಎಸ್ನ ಕೆ.ವಿವೇಕಾನಂದ 3,258 ಮತಗಳಿಂದ ಮುನ್ನಡೆ ಗಳಿಸಿದ್ದಾರೆ.

ಅವರು 7,916 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ನ ಮರಿತಿಬ್ಬೇಗೌಡ 4,658 ಮತಗಳನ್ನು ಪಡೆದಿದ್ದಾರೆ.

ಎರಡು ಸುತ್ತು ಸೇರಿ 14,000 ಮತಗಳ ಎಣಿಕೆ ನಡೆದಿದೆ. ಮಾಜಿ ಶಾಸಕ ವಾಟಾಳ್ ನಾಗರಾಜ್ 66, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ 17 ಮತಗಳನ್ನಷ್ಟೆ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾದ

ನಿವೃತ್ತ ಡಿಡಿಪಿಯು ನಾಗಮಲ್ಲೇಶ್ 216 ಹಾಗೂ ಹ.ರ.ಮಹೇಶ್ 338 ಮತಗಳನ್ನು ಗಳಿಸಿ ಗಮನಸೆಳೆದಿದ್ದಾರೆ.

ಈವರೆಗೆ ಎಣಿಕೆಯಾದ ಮತಗಳಲ್ಲಿ 737 ಮತಗಳು ಕುಲಗೆಟ್ಟ ಮತಗಳಾಗಿವೆ ಎಂದು ಚುನಾವಣಾಧಿಕಾರಿ ಜಿ.ಸಿ. ಪ್ರಕಾಶ್ ತಿಳಿಸಿದ್ದಾರೆ.

ಪದವೀಧರ ಕ್ಷೇತ್ರ: ರಾಮೋಜಿಗೌಡರಿಗೆ ಮುನ್ನಡೆ

ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಕಾಂಗ್ರೆಸ್ನ ರಾಮೋಜಿ ಗೌಡ ಬಿಜೆಪಿ ಅಭ್ಯರ್ಥಿ ಅ. ದೇವೇಗೌಡರಿಗಿಂತ 760 ಮತಗಳ ಮುನ್ನಡೆ ಸಾಧಿಸಿದ್ದಾರೆ

ಮೈಸೂರು: ವಿಧಾನಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಎರಡನೇ ಸುತ್ತಿನ ಮುಕ್ತಾಯದ ವೇಳೆಗೆ ಜೆಡಿಎಸ್ನ ಎಸ್.ಎಲ್. ಭೋಜೇಗೌಡ 3,069 ಮತಗಳಿಂದ ಮುನ್ನಡೆ ಗಳಿಸಿದ್ದಾರೆ.

ಅವರು 6,645 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ನ ಕೆ.ಕೆ. ಮಂಜುನಾಥ್ ಕುಮಾರ್ 3,576 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಹರೀಶ್ ಆಚಾರ್ಯ 1,681 ಮತಗಳನ್ನು ಗಳಿಸಿದ್ದಾರೆ.

ಈವರೆಗೆ 14,000 ಮತಗಳನ್ನು ಎಣಿಕೆ ಮಾಡಲಾಗಿದ್ದು, ಅದರಲ್ಲಿ 560 ಮತಗಳು ತಿರಸ್ಕೃತಗೊಂಡಿವೆ ಎಂದು ಚುನಾವಣಾಧಿಕಾರಿ ಜಿ.ಸಿ. ಪ್ರಕಾಶ್ ತಿಳಿಸಿದ್ದಾರೆ.

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವಿನ ನಗೆ ಬೀರಿದ್ದಾರೆ. 4622 ಮತಗಳ ಅಂತರದಿಂದ ಗೆದ್ದಿದ್ದಾರೆ.

ಸತತ 5ನೇ ಬಾರಿಗೆ ಆಯ್ಕೆ ಬಯಸಿದ್ದ ಕಾಂಗ್ರೆಸ್ನ ಮರಿತಿಬ್ಬೇಗೌಡ ಸೋಲನುಭವಿಸಿದ್ದಾರೆ.

ನೈರುತ್ಯ ಪದವೀಧರರ ಕ್ಷೇತ್ರ: ಬಿಜೆಪಿಯ ಸರ್ಜಿ ಮುನ್ನಡೆ

ಮೈಸೂರು: ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಇಲ್ಲಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನಲ್ಲಿ ಬಿಜೆಪಿಯ ಧನಂಜಯ ಸರ್ಜಿ ಆರಂಭಿಕ ಮುನ್ನಡೆ ಗಳಿಸಿದ್ದಾರೆ.

ಅವರು 6,714 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ನ ಆಯನೂರು ಮಂಜುನಾಥ್ 2,434 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗದಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆ.ರಘುಪತಿ ಭಟ್ 3,218 ಮತಗಳನ್ನು ತೆಗೆದುಕೊಂಡಿದ್ದಾರೆ.

ಮೊದಲ ಸುತ್ತಿನಲ್ಲಿ 14ಸಾವಿರ ಮತಗಳ ಎಣಿಕೆ ನಡೆದಿದ್ದು, 1,093 ಮತಗಳನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ಜಿ.ಸಿ. ಪ್ರಕಾಶ್ ತಿಳಿಸಿದ್ದಾರೆ.

ಮೈಸೂರು: ವಿಧಾನಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ನ ಎಸ್.ಎಲ್. ಭೋಜೇಗೌಡ 5,267 ಮತಗಳಿಂದ ಗೆಲುವು ಸಾಧಿಸಿದರು.

ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಪಡೆದ ಅವರು, 9,829 ಮತ ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ 4,562 ಮತ ಪಡೆದರು.

19,479 ಮತಳು ಚಲಾವಣೆ ಆಗಿದ್ದವು. ಅದರಲ್ಲಿ 821 ಮತಗಳು ಅಸಿಂಧುವಾಗಿದ್ದವು.

ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ

ಬೆಂಗಳೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ಎರಡನೇ ಸುತ್ತಿನ ಮತ ಎಣಿಕೆಯ ನಂತರ ಕಾಂಗ್ರೆಸ್ನ ಡಿ.ಟಿ. ಶ್ರೀನಿವಾಸ್ 2,900 ಮತಗಳನ್ನು ಪಡೆದು ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರಿಗಿಂತ 457 ಮತಗಳ ಮುನ್ನಡೆ ಸಾಧಿಸಿದ್ದಾರೆ.

ನಾರಾಯಣಸ್ವಾಮಿ 2,443 ಮತಗಳನ್ನು ಪಡೆದಿದ್ದಾರೆ. 227 ಮತಗಳು ತಿರಸ್ಕೃತವಾಗಿವೆ. ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಾಜ್ 1,270 ಮತಗಳನ್ನು ಪಡೆದಿದ್ದಾರೆ. ಒಟ್ಟು 6,999 ಮತಗಳ ಎಣಿಕೆ ಮುಕ್ತಾಯವಾಗಿದೆ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಮಂದಗತಿಯಲ್ಲಿ ಸಾಗಿದ್ದು, ಸಂಜೆ 7ರವರೆಗೂ ಮೊದಲ ಸುತ್ತಿನ ಮತ ಎಣಿಕೆಯ ವಿವರ ಲಭ್ಯವಾಗಿಲ್ಲ.

ಬೆಳಿಗ್ಗೆಯೇ ಮತ ಎಣಿಕೆ ಕೇಂದ್ರಕ್ಕೆ ಬಂದಿರುವ ಅಭ್ಯರ್ಥಿಗಳು ಮತ ಎಣಿಕೆ ಮುಗಿಯುವುದಕ್ಕೆ ಕಾಯುತ್ತಿದ್ದಾರೆ.

ಒಟ್ಟು 14 ಮತ ಎಣಿಕೆ ಟೇಬಲ್ ಗಳನ್ನು ವ್ಯವಸ್ಥೆ ಮಾಡಿದ್ದು, ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ, ಸಹಾಯಕ ಚುನಾವಣಾಧಿಕಾರಿಗಳಾದ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲಾಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ಮೈಸೂರು: ವಿಧಾನಪರಿಷತ್ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಇಲ್ಲಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಪ್ರಗತಿಯಲ್ಲಿದ್ದು, 2ನೇ ಸುತ್ತಿನಲ್ಲಿ ಬಿಜೆಪಿಯ ಧನಂಜಯ ಸರ್ಜಿ 14,077 ಮತಗಳನ್ನು ಗಳಿಸಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಅವರು 14,077 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ನ ಆಯನೂರು ಮಂಜುನಾಥ್ 5,250 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗದಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆ.ರಘುಪತಿ ಭಟ್ 5,091 ಮತಗಳನ್ನು ತೆಗೆದುಕೊಂಡಿದ್ದಾರೆ. ಎಸ್.ಪಿ. ದಿನೇಶ್ 1,285 ಮತಗಳನ್ನು ಪಡೆದಿದ್ದಾರೆ.

ಈವರೆಗೆ ಒಟ್ಟು 28ಸಾವಿರ ಮತಗಳ ಎಣಿಕೆ ಪ್ರಕ್ರಿಯೆ ಮುಗಿದಿದೆ. 2,121 ಮತಗಳು ತಿರಸ್ಕೃತಗೊಂಡಿವೆ.

ವಿಧಾನಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಜೆಡಿಎಸ್–ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಅವರಿಗೆ ಚುನಾವಣಾಧಿಕಾರಿ ಜಿ.ಸಿ.ಪ್ರಕಾಶ್ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಪ್ರಮಾಣಪತ್ರ ವಿತರಿಸಿದರು.

ವಿಧಾನಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಜೆಡಿಎಸ್–ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರಿಗೆ ಚುನಾವಣಾಧಿಕಾರಿ ಜಿ.ಸಿ.ಪ್ರಕಾಶ್ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಪ್ರಮಾಣಪತ್ರ ವಿತರಿಸಿದರು.

ಕಲಬುರಗಿ: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಪ್ರಥಮ ಸುತ್ತಿಮ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಮುನ್ನಡೆ ಸಾಧಿಸಿದ್ದಾರೆ.

ಅಮರನಾಥ ಅವರು 4,521 ಮತಗಳು ಪಡೆದಿದ್ದು, 306 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಸಮೀಪದ ಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಅವರು 4,215 ಮತ ಮತ್ತು ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ ಅವರು 3,037 ಮತಗಳು ಪಡೆದಿದ್ದಾರೆ. 1,585 ಮತಗಳು ತಿರಸ್ಕೃತವಾಗಿವೆ. ಇದುವರೆಗೆ ಒಟ್ಟಾರೆ 13,990 ಮತಗಳ ಎಣಿಕೆ ಮುಕ್ತಾಯವಾಗಿದೆ

ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ನ ರಾಮೋಜಿ ಗೌಡ 569 ಅಲ್ಪ ಮತಗಳ ಮುನ್ನಡೆ ಸಾಧಿಸಿದ್ದಾರೆ. ರಾಮೋಜಿ 5669 ಮತಗಳನ್ನು ಪಡೆದರೆ, ಬಿಜೆಪಿಯ ಅ. ದೇವೇಗೌಡ 5090 ಮತಗಳಿಸಿದ್ದಾರೆ.

1,559 ಮತಗಳು ತಿರಸ್ಕೃತವಾಗಿವೆ. ಒಟ್ಟು 14,000 ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿದೆ.

ಮೈಸೂರು: ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಇಲ್ಲಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಮುಂದುವರಿದಿದ್ದು, ಬಿಜೆಪಿಯ ಧನಂಜಯ ಸರ್ಜಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಗುರುವಾರ ರಾತ್ರಿ 3ನೇ ಸುತ್ತಿನ ಮುಕ್ತಾಯದ ವೇಳೆಗೆ ಅವರು 22,655 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 8,238 ಮತಗಳನ್ನು ಗಳಿಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗದಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆ.ರಘುಪತಿ ಭಟ್ 5,833 ಮತಗಳನ್ನು ತೆಗೆದುಕೊಂಡಿದ್ದಾರೆ. ಎಸ್.ಪಿ. ದಿನೇಶ್ 1,285 ಮತಗಳನ್ನು ಪಡೆದಿದ್ದಾರೆ.

3ನೇ ಸುತ್ತಿನವರೆಗೆ 42ಸಾವಿರ ಮತಗಳ ಎಣಿಕೆ ಪ್ರಕ್ರಿಯೆ ಮುಗಿದಿದೆ. 3,147 ಮತಗಳು ತಿರಸ್ಕೃತಗೊಂಡಿವೆ. ಶುಕ್ರವಾರ ಮುಂಜಾನೆಯವರೆಗೂ ಮತ ಎಣಿಕೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ಕಲಬುರಗಿ: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಎರಡನೇ ಸುತ್ತಿನ ಮತ ಎಣಿಕೆಯಲ್ಲೂ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಮುನ್ನಡೆ ಸಾಧಿಸಿದ್ದಾರೆ.

ಅಮರನಾಥ ಅವರು 8,732 ಮತಗಳು ಪಡೆದಿದ್ದು, 309 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ 8,423 ಮತ್ತು ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪ್ ರೆಡ್ಡಿ ಅವರು 6,163 ಮತ ಪಡೆದಿದ್ದಾರೆ. 3,429 ಮತಗಳು ತಿರಸ್ಕೃತವಾಗಿದೆ. ಒಟ್ಟಾರೆ ರಾತ್ರಿ 9.30ರವರೆಗೆ 27,981 ಮತಗಳ ಎಣಿಕೆ ಮುಕ್ತಾಯವಾಗಿದೆ.

ಮೈಸೂರು: ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಇಲ್ಲಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಮುಂದುವರಿದಿದ್ದು, ಬಿಜೆಪಿಯ ಧನಂಜಯ ಸರ್ಜಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಗುರುವಾರ ತಡರಾತ್ರಿ 4ನೇ ಸುತ್ತಿನ ಮುಕ್ತಾಯದ ವೇಳೆಗೆ ಅವರು 31,199 ಮತಗಳನ್ನು ಅವರು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 11,226 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆ.ರಘುಪತಿ ಭಟ್ 6,564 ಮತಗಳನ್ನು ತೆಗೆದುಕೊಂಡಿದ್ದಾರೆ. ಎಸ್.ಪಿ. ದಿನೇಶ್ 2,203 ಮತಗಳನ್ನು ಪಡೆದಿದ್ದಾರೆ.

4ನೇ ಸುತ್ತಿನವರೆಗೆ 56ಸಾವಿರ ಮತಗಳ ಎಣಿಕೆ ಪ್ರಕ್ರಿಯೆ ಮುಗಿದಿದೆ. 4,270 ಮತಗಳು ತಿರಸ್ಕೃತಗೊಂಡಿವೆ.

ಕಲಬುರಗಿ: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಗುರುವಾರ ಸಂಜೆ 4.30ರಿಂದ ಆರಂಭವಾಗಿದ್ದು, ರಾತ್ರಿಯೂ ಮುಂದುವರೆದಿದೆ.

ರಾತ್ರಿ 11.15ಕ್ಕೆ ಮುಕ್ತಾಯವಾದ ಮೂರನೇ ಸುತ್ತಿನ ಮತ ಎಣಿಕೆ ಅಂತ್ಯಗೊಂಡಾಗ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು.

ಇದೇ ಮೊದಲ ಬಾರಿಗೆ ಚಲಾವಣೆಯಾದ ಮತಗಳ ಸಂಖ್ಯೆ 1.09 ಲಕ್ಷ ದಾಟಿತ್ತು. ಬೆಳಿಗ್ಗೆ 8ಕ್ಕೆ ಸುಮಾರಿಗೆ ಸ್ಟ್ರಾಂಗ್ ರೂಮ್ ತೆರೆದರೂ ಎಲ್ಲ ಮತಗಳನ್ನು ಜೋಡಿಸಲು ಸುಮಾರು ಎಂಟು ಗಂಟೆ ಬೇಕಾಯಿತು. ಹೀಗಾಗಿ, ಸಂಜೆಯ ಬಳಿಕವೇ ಮತ ಎಣಿಕೆ ಶುರುವಾಯಿತು.

ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ, ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಹಾಗೂ ಪಕ್ಷೇತರ ಅಭ್ಯರ್ಥಿ ಎನ್. ಪ್ರತಾಪ್ ರೆಡ್ಡಿ ಅವರ ಮಧ್ಯೆ ತೀವ್ರ ಪೈಪೋಟಿ ಕಂಡು ಬಂದಿದ್ದರಿಂದ ಮೂರನೇ ಸುತ್ತಿನವರೆಗೆ ಯಾರೊಬ್ಬರೂ ಶೇ 50ರಷ್ಟು ಮತಗಳನ್ನು ಪಡೆಯಲಿಲ್ಲ. ಹೀಗಾಗಿ, ಎರಡನೇ ಪ್ರಾಶಸ್ತ್ಯದ ಮತ ಎಣಿಕೆ ನಡೆಯುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಮೂರನೇ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ: ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಮುನ್ನಡೆ ಸಾಧಿಸಿದ್ದಾರೆ.

ಚಂದ್ರಶೇಖರ ಪಾಟೀಲ ಅವರು 13,878 ಮತಗಳು ಪಡೆದಿದ್ದು, 715 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ 13,163, ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ ಅವರು 8,118 ಮತ ಪಡೆದಿದ್ದಾರೆ. 5,021 ಮತಗಳು ತಿರಸ್ಕೃತವಾಗಿದೆ. ಮೂರನೇ ಸುತ್ತಿನವರೆಗೂ 41,966 ಮತಗಳ ಎಣಿಕೆ ನಡೆದಿತ್ತು.

ವಿಧಾನಪರಿಷತ್ ನೈರುತ್ಯ ಪದವಿಧದರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಿಜೆಪಿ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರಿಗೆ ಚುನಾವಣಾಧಿಕಾರಿ ಜಿ.ಸಿ.ಪ್ರಕಾಶ್ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಪ್ರಮಾಣಪತ್ರ ವಿತರಿಸಿದರು.

ಕಲಬುರಗಿ: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಎಂಟನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಅವರು 39,496 ಮತಗಳನ್ನು ಪಡೆದಿದ್ದು, 4,446 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ 35,050 ಮತ್ತು ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ ಅವರು 17,421 ಮತ ಪಡೆದಿದ್ದಾರೆ. 48,260 ಮತಗಳ ಕೋಟಾ ನಿಗದಿ ಮಾಡಲಾಗಿದ್ದು, ಎರಡನೇ ಪ್ರಾಶಸ್ತ್ಯದ ಮತ ಎಣಿಕೆಯ ಬಳಿಕ ವಿಜೇತ ಅಭ್ಯರ್ಥಿಯನ್ನು ಘೋಷಿಸಲಾಗುತ್ತದೆ.

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಅವರ ಗೆಲುವು ಬಹುತೇಕ ಖಚಿತವಾಗಿದ್ದು, ಪಕ್ಷದ ಕಾರ್ಯಕರ್ತರು ಮತ ಎಣಿಕೆ ನಡೆಯುತ್ತಿರುವ ಗುಲಬರ್ಗಾ ವಿಶ್ವವಿದ್ಯಾಲಯದ ಸಾಧ್ವಿ ಶಿರೋಮಣಿ ಹೇಮರಡ್ಡಿ ಮಲ್ಲಮ್ಮ ಅಧ್ಯಯನ ಪೀಠದ ಆವರಣದ ಎದುರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ಎರಡನೇ ಪ್ರಾಶಸ್ತ್ಯದ ಮತ ಎಣಿಕೆಯಲ್ಲಿ ಪಾಟೀಲ ಅವರು ಗೆಲುವು ಸಾಧಿಸಿದ್ದು, ಗೆಲುವಿನ ನಿಖರ ಅಂತರ ಇನ್ನಷ್ಟೇ ಗೊತ್ತಾಗಬೇಕಿದೆ.

ಸೋಲು ಖಚಿತವಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಮತ ಎಣಿಕೆ ಕೇಂದ್ರದಿಂದ ತೆರಳಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮರನಾಥ ಪಾಟೀಲ, 'ನನ್ನ ಪರವಾಗಿ ನಿರಂತರವಾಗಿ ಕೆಲಸ ಮಾಡಿದ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಸಾಕಷ್ಟು ಹಣ ಸುರಿದಿದ್ದಾರೆ ಎಂಬ ಮಾತುಗಳಿವೆ. ನಾವು ಅಂತಹ ಪಾಪದ ಕೆಲಸ ಮಾಡಿಲ್ಲ. ಸೋತರೂ ನಾನು ಈ ಭಾಗದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ' ಎಂದರು.

ಚುನಾವಣಾಧಿಕಾರಿಯೂ ಆದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ನೇತೃತ್ವದಲ್ಲಿ ಮತ ಎಣಿಕೆ ನಡೆಯಿತು.

ಮೊದಲ ಪ್ರಾಶಸ್ತ್ಯದ ಮತ ಎಣಿಕೆಯಲ್ಲಿ ಯಾರೊಬ್ಬರೂ ನಿಗದಿತ ಮತಗಳನ್ನು ಪಡೆಯಲಿಲ್ಲ. ಮೊದಲ ಪ್ರಾಶಸ್ತ್ಯದ ಮತ ಎಣಿಕೆ ಶುಕ್ರವಾರ ಬೆಳಗಿನ ಜಾವದವರೆಗೆ ನಡೆಯಿತು.

ನಂತರ ನಡೆದ ಎರಡನೇ ಪ್ರಾಶಸ್ತ್ಯದ ಮತ ಎಣಿಕೆಯಲ್ಲಿ ಚಂದ್ರಶೇಖರ ಪಾಟೀಲ ಹುಮನಾಬಾದ್ ಅವರು ಗೆಲುವು ಸಾಧಿಸಿದರು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.