ಬೆಂಗಳೂರು: ಸಿದ್ದರಾಮಯ್ಯ ಅವರ ಬಗ್ಗೆ ಮಾಜಿ ಸಚಿವ ಡಾ. ಸುಧಾಕರ್ ಹೇಳಿದ್ದು ಸತ್ಯಕ್ಕೆ ದೂರವಾದ ಮಾತು ಎಂದು ಮಾಜಿ ಸಚಿವ ಎಂ.ಟಿ.ಬಿ ನಾಗರಾಜ್ ಅವರು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸೇರಲು ಸಿದ್ದರಾಮಯ್ಯ ಅವರ ಪಾತ್ರ ಇದೆ ಎಂದು ಸುಧಾಕರ್ ಅವರು ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೇ? ಎಂದು ಪ್ರಶ್ನೆ ಮಾಡಿದ್ದಾರೆ.

ಎಂ.ಟಿ.ಬಿ ನಾಗರಾಜ್ ಅವರು ಮಾಡಿರುವ ಟ್ವೀಟ್ ಹೀಗಿದೆ.

‘ಮಾನ್ಯ ಸಿದ್ದರಾಮಯ್ಯರವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ‘

‘ಮಾಜಿ ಸಚಿವರಾದ ಸುಧಾಕರ್ ರವರು ಇಂದು ಮಾನ್ಯ ಸಿದ್ದರಾಮಯ್ಯ ರವರ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ರವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು?‘

‘ಬಿಜೆಪಿ ಸೇರಲು ಸಿದ್ದರಾಮಯ್ಯರವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇತ್ತೆಂದು ಸುಧಾಕರ್ ರವರು ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೆ? ಇಷ್ಟು ದಿನ ಮೌನವಾಗಿದ್ದು?ಈಗ ಇದರ ಪ್ರಸ್ತಾಪದ ಮರ್ಮವಾದರೂ ಏನು?‘

ಬುಧವಾರ ಬೆಳಿಗ್ಗೆ ಟ್ವೀಟ್ ಮಾಡಿದ್ದ ಸುಧಾಕರ್ ಅವರು, ‘ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ?‘ ಎಂದು ಪ್ರಶ್ನೆ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.