ಬೆಂಗಳೂರು: ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಕುರಿತು ಸುಳ್ಳು ಹರಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಬೇಕು’ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಆಗ್ರಹಿಸಿದರು.

ಸಂವಿಧಾನ ಪುಸ್ತಕ ಮತ್ತು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ವಿಳಾಸಕ್ಕೆ ಕೊರಿಯರ್‌ನಲ್ಲಿ ಕಳುಹಿಸಿದ ಬಳಿಕ ಅವರು ಮಾತನಾಡಿದರು.

‘ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಕುರಿತು ಮಾಹಿತಿ ಇಲ್ಲ. ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ನಾಯಕರು ಓದಬೇಕು ಎಂಬ ಉದ್ದೇಶದಿಂದ ಪ್ರಣಾಳಿಕೆಯನ್ನು ಅವರಿಗೆ ಕಳುಹಿಸಲಾಗಿದೆ. ಐತಿಹಾಸಿಕ ಐದು ಗ್ಯಾರಂಟಿ ಯೋಜನೆಯನ್ನು ಕಾಂಗ್ರೆಸ್ ನೀಡಿದೆ. ಈ ಪ್ರಣಾಳಿಕೆ 140 ಕೋಟಿ ಜನರ ಧ್ವನಿಯಾಗಿದೆ’ ಎಂದರು.

‘ಸುಳ್ಳು, ಭ್ರಷ್ಟಾಚಾರ, ದ್ವೇಷ ರಾಜಕಾರಣಗಳಲ್ಲಿ ನರೇಂದ್ರ ಮೋದಿ ಚಾಂಪಿಯನ್ ಆಗಿದ್ದಾರೆ. ದೇಶದ ಕಪ್ಪು ಹಣ ವಿದೇಶದಲ್ಲಿ ಶೇ 10ರಷ್ಟು ಹೆಚ್ಚಾಗಿದೆ. ಇದಕ್ಕೆ ಉತ್ತರವಿಲ್ಲ’ ಎಂದೂ ಹೇಳಿದರು.

ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.