ಬೀದರ್: ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ರಾಜ್ಯ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರು ನಗರದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದರು.

ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಪಾಟೀಲ, ಮುಖಂಡರಾದ ಬಸವರಾಜ ಆರ್ಯ, ಎಂ.ಜಿ. ಮುಳೆ ಅವರೊಂದಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.

'ಭಗವಂತ ಖೂಬಾ ಅವರು ಸಾಂಕೇತಿಕವಾಗಿ, ಸರಳ ರೀತಿಯಲ್ಲಿ ಕೆಲ ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಏ. 18ರಂದು ಶಕ್ತಿ ಪ್ರದರ್ಶನದೊಂದಿಗೆ ಉಮೇದುವಾರಿಕೆ ಸಲ್ಲಿಸುವರು' ಎಂದು ಅವರ ಆಪ್ತ ಸಹಾಯಕ ಅಮರ್ ಹಿರೇಮಠ 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.

ಈ ಹಿಂದಿನ ಎರಡೂ ಚುನಾವಣೆಗಳಲ್ಲಿ ಗೆದ್ದಿರುವ ಖೂಬಾ ಅವರು ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
.ಆಳಂದ ತಾಲ್ಲೂಕಿನಲ್ಲಿ ಖೂಬಾ ಪ್ರಚಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.