ಹಾವೇರಿ: ನರೇಂದ್ರ ಮೋದಿ ನೇತೃತ್ವದಲ್ಲಿ ಎನ್ ಡಿ ಎ ಸರ್ಕಾರ ರಚನೆ ಆಗಲಿದೆ. ಆ ವಿಶ್ವಾಸ ಇದೆ ಎಂದು ಹಾವೇರಿ ಗದಗ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬಿಜೆಪಿಗೆ ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹಿನ್ನಡೆ ಆಗಿದೆ. ಆದರೆ, ಮತ ಎಣಿಕೆ ಪೂರ್ಣಗೊಳ್ಳುವ ವೇಳೆಗೆ ಈಗಿರುವ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ. ಎನ್ ಡಿಎ ಮೈತ್ರಿಕೂಟಕ್ಕೆ ಮುನ್ನೂರಕ್ಕಿಂತ ಹೆಚ್ಚು ಸ್ಥಾನಗಳು ಸಿಗಲಿವೆ ಎಂದರು.

ಕೆಲವು ರಾಜ್ಯಗಳಲ್ಲಿ ನಮ್ಮ ನಿರೀಕ್ಷೆಗಿಂತ ಕಡಿಮೆ ಸ್ಥಾನಗಳು ಬಂದಿವೆ. ಅದಕ್ಕೆ ಕಾರಣಗಳು ಹಲವು ಇದ್ದು, ಅದನ್ನು ಮುಂದಿನ ದಿನಗಳಲ್ಲಿ ವಿಶ್ಲೇಷಣೆ ಮಾಡಲಾಗುವುದು. ಕೊರತೆಗಳನ್ನು ಸರಿ ಪಡಿಸಿ ಮೋದಿ ನೇತೃತ್ವದಲ್ಲಿ ದೇಶವನ್ನು ಮುನ್ನಡೆಸಲಾಗುವುದು ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆ ಆಗಿರುವುದು ಸತ್ಯ. ನನ್ನ ಪ್ರಕಾರ ಕರ್ನಾಟದಲ್ಲಿ ಇನ್ನೂ ನಾಲ್ಕೈದು ಸ್ಥಾನಗಳನ್ನು ಗೆಲ್ಲಬೇಕಿತ್ತು. ಆದರೆ, ಕಡಿಮೆ ಅಂತರದಲ್ಲಿ ಅವುಗಳನ್ನು ಕಳೆದುಕೊಂಡೆವು. ಅದರ ಬಗ್ಗೆಯೂ ಚಿಂತನೆ ಮಾಡಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.