ಶಿರಸಿ: ರಾಷ್ಟ್ರೀಯತೆ, ಹಿಂದುತ್ವದೆಡೆ ಕ್ಷೇತ್ರದ ಜನರಲ್ಲಿ ಜಾಗೃತಿ ಮೂಡಿಸುವ ನಿರಂತರ ಪ್ರಯತ್ನ ಮಾಡಿರುವ ಸಂಸದ ಅನಂತಕುಮಾರ ಹೆಗಡೆ ಅವರ ಬೆಂಬಲವನ್ನು ಪಡೆದು ಚುನಾವಣೆ ಎದುರಿಸುವುದಾಗಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಟಿಕೆಟ್ ಘೋಷಣೆ ಬೆನ್ನಲ್ಲಿ ನಗರದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಅನಂತಕುಮಾರ ಹೆಗಡೆ ಅವರು ಕ್ಷೇತ್ರವನ್ನು ನಿರಂತರವಾಗಿ ಪ್ರತಿನಿಧಿಸಿ ಬಿಜೆಪಿಗೆ ಗೆಲುವು ತಂದು ಕೊಟ್ಟಿದ್ದಾರೆ. ಜತೆಗೆ, ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸಲು ಸದಾ ಶ್ರಮಿಸಿದ್ದಾರೆ. ಹೀಗಾಗಿ ಅವರು

ಅಭಿನಂದನಾರ್ಹರು. ಮುಂಬರುವ ಚುನಾವಣೆಯಲ್ಲಿ ಅವರ ಬೆಂಬಲ ಪಡೆದು ಮತ್ತೊಮ್ಮೆ ಮೋದಿ ಪ್ರಧಾನಿಯನ್ನಾಗಿಸಲು ಒಟ್ಟಾಗಿ ಪ್ರಯತ್ನಿಸುತ್ತೇವೆ ಎಂದರು.

40 ವರ್ಷದ ರಾಜಕಾರಣದಲ್ಲಿ ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಇದೀಗ ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಿ ಅವಕಾಶ ನೀಡುವ ಮೂಲಕ ದೊಡ್ಡ ಜವಾಬ್ದಾರಿ ವಹಿಸಿದ್ದಾರೆ. ಬಿಜೆಪಿ ಪರಿವಾರದವರೆಲ್ಲ ಒಂದಾಗಿ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು ತರುತ್ತೇವೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.