ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀವು ತಂಡ ಸೇರುತ್ತಿರುವುದು ದೊಡ್ಡ ಆಸ್ತಿ: ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ಮೋದಿ

Published 30 ಏಪ್ರಿಲ್ 2024, 14:31 IST
Last Updated 30 ಏಪ್ರಿಲ್ 2024, 14:31 IST
ಅಕ್ಷರ ಗಾತ್ರ

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದು, ಚುನಾವಣೆಯಲ್ಲಿ ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ.

‘ನೀವು ಮುಖ್ಯಮಂತ್ರಿಯಾಗಿ, ನೀರಾವರಿ ಸಚಿವರಾಗಿ ಗೃಹ ಸಚಿವರಾಗಿ, ಕಾನೂನು ಸಚಿವರಾಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದೀರಿ. ನೀವು ಶಿಗ್ಗಾವಿಯಲ್ಲಿ ಸುಮಾರು 30 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಮಾಡಿದ್ದೀರಿ. ಕ್ಷೇತ್ರದಲ್ಲಿ ಸಿಮೆಂಟ್ ರಸ್ತೆಗಳು, ಶಿಕ್ಷಣ ಸಂಸ್ಥೆಗಳನ್ನು ನಿರ್ಮಾಣ ಮಾಡಿದ್ದೀರಿ, ಕೋವಿಡ್ ಸಂದರ್ಭದಲ್ಲಿ ನಿಮ್ಮ ಸ್ವಂತ ಮನೆಯನ್ನು ಕೋವಿಡ್ ಕೇಂದ್ರವನ್ನಾಗಿ ಮಾಡಿ ಆಸ್ಪತ್ರೆಗಳ ಮೇಲಿನ ಭಾರ ಕಡಿಮೆ ಮಾಡಿದ್ದೀರಿ. ನೇಕಾರರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಿ, ಆಧುನಿಕ ತಂತ್ರಜ್ಞಾನ ಬಳಸಿ ಅವರ ಜೀವನ ಮಟ್ಟ ಸುಧಾರಣೆ ಮಾಡಿದ್ದೀರಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಮಾಡಿದ್ದೀರಿ, ನೀವು ಒಬ್ಬ ಕಾರ್ಯಕರ್ತರಾಗಿ ಪಡೆದ ಅನುಭವ ಜನ ಸೇವಕರಾಗಿ ಮಾಡಿದ ಸೇವೆ ಹಾವೇರಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದ್ದಾರೆ.

ಜನರ ಆಶೀರ್ವಾದದಿಂದ ನೀವು ಸಂಸದರಾಗಿ ನಮ್ಮ ತಂಡದ ಸದಸ್ಯರಾಗಿ ಬರುವುದು ನನಗೆ ದೊಡ್ಡ ಆಸ್ತಿ ಸಿಕ್ಕಂತೆ. ನಮ್ಮ ತಂಡ ಹಾವೇರಿ ಕ್ಷೇತ್ರ ಹಾಗೂ ದೇಶದ ಅಭಿವೃದ್ಧಿಗೆ ಶ್ರಮವಹಿಸಲಿದೆ. ನಾನು ಈ ಪತ್ರದ ಮೂಲಕ ಕ್ಷೇತ್ರದ ಜನತೆಗೆ ಹೇಳುವುದೇನೆಂದರೆ, ಈ ಚುನಾವಣೆಯಲ್ಲಿ ಬಿಜೆಪಿ ಪಡೆಯುವ ಪ್ರತಿಯೊಂದು ಮತವೂ 2047ಕ್ಕೆ ಅಭಿವೃದ್ಧಿ ಹೊಂದಿದ ಭಾರತ ಮಾಡಲು ಮಹತ್ವದ್ದಾಗಿವೆ. ಮೊದಲ ಎರಡು ಹಂತದ ಮತದಾನದಲ್ಲಿ ಮತದಾರರು ತಮ್ಮ ಮತಗಳ ಮೂಲಕ ದೇಶದ ಅಭಿವೃದ್ಧಿ ಪರ ಇರುವ ಸಂದೇಶ ನೀಡಿದ್ದಾರೆ.

ನನ್ನ ಪ್ರತಿ ಕ್ಷಣವೂ ದೇಶದ ಜನರ ಶ್ರೇಯೋಭಿವೃದ್ದಿಗೆ ಮೀಸಲಿದೆ ಎಂದು ಹಾವೇರಿ ಕ್ಷೇತ್ರದ ಅಭ್ಯರ್ಥಿಯಾಗಿ ಈ ಸಂದೇಶವನ್ನು ಎಲ್ಲ ಮತದಾರರಿಗೆ ತಲುಪಿಸಿ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT