ಬೆಂಗಳೂರು: ಭಾವನಾತ್ಮಕವಾಗಿ ಕೆರಳಿಸಿ ಮತ ಹಾಕಿಸಿಕೊಂಡು ವಂಚಿಸುವವರು ನಾವಲ್ಲ. ನಿಮ್ಮ ಭಾವನೆಗಳನ್ನು ಗೌರವಿಸುತ್ತಲೇ ಬದುಕಿನ ಸಂಕಷ್ಟಗಳಿಗೆ ಸ್ಪಂದಿಸುತ್ತಾ ಬಂದಿದ್ದೇವೆ. ಭಾವನೆಗಳನ್ನು ಕೆರೆಳಿಸುವವರನ್ನು ದೂರವಿಡಿ. ಹೃದಯದ ಮಾತು ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಪರವಾಗಿ ಬಿರುಸಿನ ಪ್ರಚಾರ ಕೈಗೊಂಡು ಮಾತನಾಡಿದರು.

ಸೌಮ್ಯಾ ರೆಡ್ಡಿ ಗೆದ್ದರೆ ನಾನು ಗೆದ್ದಂತೆ. ಭಾವನಾತ್ಮಕವಾಗಿ ಕೆರಳಿ ಮತ ಹಾಕಿದ್ದಕ್ಕೆ ಹತ್ತು ವರ್ಷದಲ್ಲಿ ದೇಶಕ್ಕೆ ಮತ್ತು ನಿಮಗೆ ಸಿಕ್ಕಿದ್ದೇನು ಎಂದು ಪ್ರಶ್ನಿಸಿದರು.

ಸಂಸದ ತೇಜಸ್ವಿ ಸೂರ್ಯ ಸಂಸದರಾಗಿ ರಾಜ್ಯಕ್ಕೆ ಆದ ಅನ್ಯಾಯದ ಬಗ್ಗೆ ಒಮ್ಮೆಯೂ ಧ್ವನಿ ಎತ್ತಿಲ್ಲ. ಮೋದಿ ಮುಖ ತೋರಿಸಿ ಓಟು ಕೇಳುವ ದುರ್ಗತಿ ಬಿಜೆಪಿಗೆ ಬಂದಿದೆ. ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟು ಮತ ಕೇಳುವ ಮುಖ ಇಲ್ಲ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.