ಚಿತ್ರದುರ್ಗ: ಲೋಕಸಭಾ ಚುನಾವಣೆಯ ಬಳಿಕ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.

‘ಸಿದ್ದರಾಮಯ್ಯ ಅವರು ಶೋಷಿತ ಸಮುದಾಯಗಳ ಹೃದಯ ಸಿಂಹಾಸನದಲ್ಲಿರುವ ಜನನಾಯಕ. ಬಡ ಸಮುದಾಯಕ್ಕೆ ಅವರು ಸಾಕಷ್ಟು ಉಪಕಾರ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರ ಏಳಿಗೆಗೆ ಶ್ರಮಿಸಿದ್ದಾರೆ. ರಾಜ್ಯದ ಜನರು ಅವರ ಕೈಬಿಡುವುದಿಲ್ಲ’ ಎಂದು ಮಂಗಳವಾರ ಸುದ್ದಿಗಾರೊಂದಿಗೆ ಮಾತನಾಡಿದರು.

‘ಜನರ ಏಳಿಗೆಗೆ ಶ್ರಮಿಸಿದ ಸಿದ್ದರಾಮಯ್ಯ ಅವರು ಕೈ ಬಲಪಡಿಸುವಂತೆ ಕೇಳುವುದರಲ್ಲಿ ತಪ್ಪೇನೂ ಇಲ್ಲ. ಹೆಚ್ಚು ಮತ ಹಾಗೂ ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ ಅವರಿಗೆ ಶಕ್ತಿ ನೀಡಿದರೆ ಬಡವರಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು.
.ಅಮಿತ್ ಶಾಗೆ ರಾಜ್ಯದಲ್ಲಿ ಮತ ಕೇಳುವ ನೈತಿಕತೆ ಇಲ್ಲ: ಸಿದ್ದರಾಮಯ್ಯ ವಾಗ್ದಾಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.