ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ ಮಂಗಳವಾರ ನೆತ್ತಿ ಸುಡುವ ಬಿಸಿಲಿನಲ್ಲೂ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು.

ಗಾಂಧಿನಗರ, ಚಿಕ್ಕಪೇಟೆ ವಾರ್ಡ್ ಮತ್ತು ಚಾಮರಾಜಪೇಟೆಯಲ್ಲಿ ತಮಿಳು ಭಾಷಿಕರು ಹೆಚ್ಚಿರುವ ಪ್ರದೇಶಗಳಲ್ಲಿ ಮೋಹನ್ ರೋಡ್ ಶೋ ನಡೆಸಿದರು. ಮೋಹನ್ ಅವರಿಗೆ ಪುದುಚೇರಿ ಸಚಿವರಾದ ಎ.ಕೆ. ಸಾಯಿ ಜೆ. ಸರವಣಕುಮಾರ್, ಎ. ನಮಶಿವಾಯಮ್ ಹಾಗೂ ಪುದುಚೇರಿ ಬಿಜೆಪಿ ಅಧ್ಯಕ್ಷ ಸೆಲ್ವಗಣಪತಿ, ಶಾಸಕ ರಿಚರ್ಡ್ಸ್ ಜಾನ್ ಕುಮಾರ್ ಮೋಹನ್ ಸಾಥ್ ನೀಡಿದರು.

ಪ್ರಚಾರಕ್ಕೆ ಇನ್ನು ಒಂದು ದಿನ ಮಾತ್ರ ಉಳಿದಿದ್ದು, ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು, ಸುಡುವ ಬಿಸಿಲನ್ನೂ ಲೆಕ್ಕಿಸದೆ ತಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸಿದರು. ಜೆಡಿಎಸ್ ಶಾಸಕ ಗೋವಿಂದರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ಮಂಡಲ ಅಧ್ಯಕ್ಷ ಶೈತಾನ್ ಸಿಂಗ್ ರೋಡ್ ಶೋನಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.