ನವದೆಹಲಿ: ’ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರು ಮತದಾರರಿಗೆ ಉಚಿತ ಕೊಡುಗೆಗಳನ್ನು ನೀಡಲು ಯೋಜನೆ ರೂಪಿಸುತ್ತಿದ್ದಾರೆ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಲ್ಲಿಸಿದ ದೂರಿನ ಕುರಿತು ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯವರಿಗೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

ಈ ಸಂಬಂಧ ಮುಖ್ಯ ಚುನಾವಣಾಧಿಕಾರಿಯವರಿಗೆ ಮಾರ್ಚ್ 21ರಂದು ಪತ್ರ ಬರೆದಿರುವ ಆಯೋಗವು ಮಾದರಿ ನೀತಿ ಸಂಹಿತೆ ಹಾಗೂ ಸಂಬಂಧಿತ ಕಾನೂನುಗಳ ನಿಬಂಧನೆಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಬೇಕು ಹಾಗೂ ಆದಷ್ಟು ಶೀಘ್ರದಲ್ಲಿ ಅನುಸರಣಾ ವರದಿ ಸಲ್ಲಿಸಬೇಕು ಎಂದು ಹೇಳಿದೆ.

'ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಭ್ರಷ್ಟ ಚಟುವಟಿಕೆಗಳನ್ನು ನಿಯಂತ್ರಿಸಲು ರಾಜ್ಯ ಚುನಾವಣಾಧಿಕಾರಿಗಳು ವಿಫಲರಾಗಿದ್ದಾರೆ. ಅಧಿಕಾರಿಗಳಿಂದ ಕರ್ತವ್ಯ ಲೋಪ ಆಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹೋದರರಾಗಿರುವ ಸುರೇಶ್ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹೆದರುತ್ತಿದ್ದಾರೆ’ ಎಂದು ದೇವೇಗೌಡರು ದೂರಿನಲ್ಲಿ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.