ಬೆಳಕವಾಡಿ: ‘ಜಿಲ್ಲೆಯ ಜನರ ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ಮತದಾರರ ಒಲವು ನನ್ನ ಪರ ಇದೆ’ ಎಂದು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಹೇಳಿದರು.

ಮಳವಳ್ಳಿ ತಾಲ್ಲೂಕಿನ ಸರಗೂರು ಬಳಿಯ ಮಹದೇಶ್ವರಸ್ವಾಮಿ ದೇವಸ್ಥಾನ ಸಮೀಪದ ಗುರುವಾರ ನಡೆದ ಉಪ್ಪಾರ ಜನಾಂಗದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯ ಜನರ ಆಶಯಗಳಿಗೆ ಬದ್ಧನಾಗಿ ಕೆಲಸ ಮಾಡುವ ಕನಸಿನೊಂದಿಗೆ ಚುನಾವಣೆಗೆ ಸ್ಪರ್ಧೆ ಮಾಡಿರುವೆ, ಜಿಲ್ಲೆಯ ಶಾಸಕರ ಸಲಹೆ ಸಹಕಾರದೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುವೆ’ ಎಂದು ಭರವಸೆ ನೀಡಿದರು.

ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ‘ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದ ಜನರು ಹೆಚ್ಚಿನ ರೀತಿಯಲ್ಲಿ ಮತ ನೀಡಿದ್ದು, ಈಗಾಗಲೇ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಲೋಕಸಭೆ ಚುನಾವಣೆಯಲ್ಲೂ ಸಹ ನಮ್ಮ ಅಭ್ಯರ್ಥಿಗೆ ಮತ ನೀಡುವ ಮೂಲಕ ಮತ್ತಷ್ಟು ಶಕ್ತಿ ತುಂಬಬೇಕು’ ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಮುಖಂಡರಾದ ಆರ್.ಎನ್.ವಿಶ್ವಾಸ್, ಮುಟ್ಟನಹಳ್ಳಿ ಅಂಬರೀಶ್, ಗುರುಸ್ವಾಮಿ, ಅಮೃತ್ ಶ್ರೀಕಂಠೇಶ್, ಅಶ್ವತ್ಥ್, ಮಹದೇವು, ಮಹೇಶ್, ಬಂಕ್ ಮಹದೇವು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.