ಮೈಸೂರು: ‘ಯುವಜನರು ಮತದಾನದಿಂದ ಹಿಂದೆ ಸರಿಯಬಾರದು’ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಹೇಳಿದರು.

ಏ.26ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಇಲ್ಲಿನ ಗನ್‌ಹೌಸ್ ವೃತ್ತದಿಂದ ಕೆಂಪೇಗೌಡ ವೃತ್ತದವರೆಗೆ (ಮಣಿಪಾಲ್ ಆಸ್ಪತ್ರೆ ಜಂಕ್ಷನ್)ವರೆಗೆ ಬುಧವಾರ ಆಯೋಜಿಸಿದ್ದ ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಪ್ರತಿಯೊಬ್ಬ ಮತದಾರರು ಅದರಲ್ಲೂ ಯುವ ಮತದಾರರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಯಾರೂ ಯಾವುದೇ ಆಸೆ– ಆಮಿಷಕ್ಕೆ ಒಳಗಾಗದೆ ನೈತಿಕ ಮತದಾನವನ್ನು ಕಡ್ಡಾಯವಾಗಿ ಮಾಡಬೇಕು’ ಎಂದರು.

‘ಚುನಾವಣಾ ಅಕ್ರಮಗಳನ್ನು ತಡೆಯುವ ಕೆಲಸ ಕೇವಲ ಅಧಿಕಾರಿಗಳಿಗೆ ಸೀಮಿತವಾಗಿಲ್ಲ. ಪ್ರತಿಯೊಬ್ಬರೂ ನಮ್ಮೊಂದಿಗೆ ಕೈಜೋಡಿಸಬೇಕು. ಚುನಾವಣಾ ಅಕ್ರಮಗಳು ಕಂಡುಬಂದರೆ ಮಾಹಿತಿ ನೀಡಬೇಕು. ಇದಕ್ಕಾಗಿ ವಿನ್ಯಾಸಗೊಳಿಸಿರುವ ಮೊಬೈಲ್ ಆ್ಯಪ್‌ಗಳನ್ನು ಬಳಸಿಕೊಳ್ಳಬೇಕು’ ಎಂದು ಕೋರಿದರು.

ನಗರ ಪೊಲೀಸ್ ಆಯುಕ್ತ ರಮೇಶ್ ಬನೋತ್, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯಿತ್ರಿ, ಎಸ್ಪಿ ಸೀಮಾ ಲಾಟ್ಕರ್, ಮಹಾನಗರ ಪಾಲಿಕೆಯ ಆಯುಕ್ತೆ ಎನ್.ಎಸ್. ಮಧು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.