ತೀರ್ಥಹಳ್ಳಿ: ‘ರಾಜಕಾರಣ ನನ್ನ ಕುಟುಂಬಕ್ಕೆ ಹೊಸತಲ್ಲ. ನನ್ನೊಂದಿಗೆ ಕಾಂಗ್ರೆಸ್ ಪಕ್ಷ, ಜನ ಇದ್ದಾರೆ. ಹೆದರಿ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ’ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಹೇಳಿದರು.

ಕೆಟಿಕೆ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

‘ನಮ್ಮ ತಂದೆ ಬಂಗಾರಪ್ಪ ಅವರ ಅಶಯದಂತೆ ಜನರ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಗ್ಯಾರಂಟಿ ಯೋಜನೆಗಳಿಂದ ಜನರು ಕಾಂಗ್ರೆಸ್ ಮೇಲೆ ವಿಶ್ವಾಸ ಇರಿಸಿದ್ದಾರೆ. ನನಗೆ ಒಂದು ಅವಕಾಶ ಮಾಡಿಕೊಡಿ’ ಎಂದು ಮನವಿ ಮಾಡಿದರು.

‘ಬಿಜೆಪಿಗೆ ಮತ ಕೇಳುವ ಯೋಗ್ಯತೆ ಇಲ್ಲ. 15 ವರ್ಷಗಳಿಂದ ಸಂಸದರಾಗಿದ್ದ ಬಿ.ವೈ. ರಾಘವೇಂದ್ರ ಅವರು ಜನರಿಗಾಗಿ ಏನು ಮಾಡಿದ್ದಾರೆ ? ಜನರೂ ಇದೇ ಪ್ರಶ್ನೆಯನ್ನು ಅವರಿಗೆ ಕೇಳುತ್ತಿದ್ದಾರೆ. ದ್ವೇಶ, ಭ್ರಷ್ಟಾಚಾರ ಹಿಚ್ಚಿದೆ ಬಿಟ್ಟರೆ ಜಿಲ್ಲೆಯ ಅರಣ್ಯ, ಬಗರ್‌ಹುಕುಂ ಸಾಗುವಳಿ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

‘ಲಾಭ ಶೇ 95ರಷ್ಟು ಬಿಜೆಪಿ ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಲಾಭ ಪಡೆದುಕೊಂಡಿದ್ದು, ಪಡೆಯುತ್ತಿಲ್ಲ ಎಂದು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕುಟುಕಿದರು.

‘ಗ್ಯಾರಂಟಿ ಯೋಜನೆಯನ್ನು 420 ಎಂದು ಹೇಳುತ್ತಿದ್ದ ಆರಗ ಜ್ಞಾನೇಂದ್ರ ಅವರು ಮೋದಿ ಗ್ಯಾರಂಟಿ ಯೋಜನೆಗಳ ಬಗ್ಗೆ ಏನು ಹೇಳ್ತಾರೆ. ಮಣಿಪುರದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ ವಿಶ್ವಗುರು ಯಾಕೆ ಮೌನ ವಹಿಸಿದ್ದರು’ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಪ್ರಶ್ನಿಸಿದರು.

ನಟ ಶಿವರಾಜಕುಮಾರ್, ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಎಚ್.ಎಸ್. ಸುಂದರೇಶ್, ಮಾಜಿ ಶಾಸಕ ಆಯನೂರು ಮಂಜುನಾಥ, ಆರ್. ಪ್ರಸನ್ನ ಕುಮಾರ್, ಮುಖಂಡ ಕಡ್ತೂರು ದಿನೇಶ್ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.