ಕೊಪ್ಪಳ: ‘ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದರೂ ಕಾಂಗ್ರೆಸ್ ಸೇರುವ ವಿಚಾರ ನನ್ನ ಮುಂದೆ ಇಲ್ಲ’ ಎಂದು ಸಂಸದ ಸಂಗಣ್ಣ ಕರಡಿ ಸ್ಪಷ್ಟಪಡಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪಕ್ಷಕ್ಕೆ ಬರುವಂತೆ ಸಚಿವ ಶಿವರಾಜ ತಂಗಡಗಿ ಆಹ್ವಾನ ನೀಡಿದ್ದಾರೆ. ಅವರಿಗೆ ಧನ್ಯವಾದಗಳು. ಆದರೆ, ಕಾಂಗ್ರೆಸ್ ಸೇರುವುದಿಲ್ಲ’ ಎಂದರು.

ಕಾಂಗ್ರೆಸ್ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ತಂಗಡಗಿ, ‘ಹಿರಿಯ ರಾಜಕಾರಣಿ ಸಂಗಣ್ಣ ಅವರು ಪಕ್ಷಕ್ಕೆ ಬಂದರೆ ಸ್ವಾಗತ. ಬರುವಂತೆ ಮನವಿ ಮಾಡುತ್ತೇನೆ’ ಎಂದಿದ್ದರು.

24ರಂದು ಸಭೆ: ಟಿಕೆಟ್ ಕೈ ತಪ್ಪಿದ್ದರಿಂದ ಬೇಸರಗೊಂಡಿರುವ ಸಂಗಣ್ಣ ಕರಡಿ ಅವರು ವರಿಷ್ಠರೊಂದಿಗೆ ಚರ್ಚಿಸಲು ಮಾ. 24ರಂದು ಬೆಂಗಳೂರಿನಲ್ಲಿ ಸಭೆ ನಿಗದಿಯಾಗಿದೆ. ಶಾಸಕ ಅರವಿಂದ ಬೆಲ್ಲದ ಹಾಗೂ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಅವರು ಶುಕ್ರವಾರ ಸಂಸದರ ಮನೆಗೆ ಭೇಟಿ ನೀಡಿ ಚರ್ಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.