ಹಾವೇರಿ: ಬಿಜೆಪಿ ಟಿಕೆಟ್ ಸಿಗದ ಕಾರಣ ಪ್ರತಿಭಟನೆ ನಡೆಸಿ, ಸಿಎಂ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದ ಶಾಸಕ ನೆಹರು ಓಲೇಕಾರ ಅವರು, ಶನಿವಾರ ಮತ್ತೆ ಬಸವರಾಜ ಬೊಮ್ಮಾಯಿ ಅವರನ್ನು ಏಕವಚನದಲ್ಲಿ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

‘ಬೊಮ್ಮಾಯಿ ನನ್ನ ವಿರುದ್ಧ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾನೆ. 2018ರಲ್ಲಿ ಟಿಕೆಟ್ ತಪ್ಪಿಸಲು ಪ್ರಯತ್ನ ಮಾಡಿದ್ದರು. ಕಡೇ ದಿನ ಬಿ–ಫಾರಂ ಬಂತು. ಜನರ ಸಹವಾಸ ಜಾಸ್ತಿ ಇರುವ ನಾನು ಅವರಿಗೆ ಸರಿಸಮನಾಗಿ ಬೆಳೆಯುತ್ತಿದ್ದೇನೆ ಎಂಬ ಕಾರಣಕ್ಕೆ ಟಿಕೆಟ್ ತಪ್ಪಿಸಿದ್ದಾರೆ’ ಎಂದು ದೂರಿದ್ದಾರೆ.

ಇವರಿಗೆ ಜನಬೆಂಬಲ ಇತ್ತು ಅಂದಿದ್ದರೆ ಚಿತ್ರನಟ– ನಟಿಯರನ್ನು ಕರೆಸಿ ಕ್ಯಾನ್ವಾಸ್ ಏಕೆ ಮಾಡಿಸಬೇಕಿತ್ತು. ಕ್ಷೇತ್ರದ ಯಾವುದೇ ಜನರಿಗೆ ಈತ ಬೆಲೆ ಕೊಟ್ಟಿಲ್ಲ ಎಂದು ಹರಿಹಾಯ್ದಿದ್ದಾರೆ.

ಹಾವೇರಿ ನಗರದ ತಮ್ಮ ನಿವಾಸದಲ್ಲಿ ಶನಿವಾರ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿರುವ ವಿಡಿಯೊ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.