ಬೆಳಗಾವಿ: ‘ನೆರೆಯ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಚಂದಗಡ ತಾಲ್ಲೂಕಿನ ಶಿನೋಳಿಯ ಖಾಸಗಿ ಕಾರ್ಖಾನೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದ ತಮ್ಮ ಬೆಂಬಲಿಗರೊಂದಿಗೆ ಭಾನುವಾರ ಮಾತುಕತೆ ನಡೆಸಿದರು’ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಬಿತ್ತರಿಸಲು ಕೆಲವು ಮಾಧ್ಯಮದವರು ಸ್ಥಳಕ್ಕೆ ಹೋದಾಗ, ರಮೇಶ ಅವರ ಬೆಂಬಲಿಗರು ಚಿತ್ರೀಕರಣಕ್ಕೆ ಅಡ್ಡಿಪಡಿಸಿದರು. ಪತ್ರಕರ್ತರನ್ನು ಕಂಡು ಹೊರಬಂದ ರಮೇಶ, ‘ಇದು ಚುನಾವಣೆ ಪ್ರಚಾರ ಸಭೆಯಲ್ಲ. ಗ್ರಾಮೀಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ನಾಗೇಶ ಮನ್ನೋಳಕರ್ ಅವರ ಸಂಬಂಧಿಯೊಬ್ಬರ ಕಾರ್ಖಾನೆ ಪೂಜೆಗೆ ಆಗಮಿಸಿದ್ದೇನೆ. ಎಲ್ಲರೂ ಸೇರಿಕೊಂಡು ಊಟ ಮಾಡಲು ಮಾಡಲು ಇದೊಂದು ಸಂದರ್ಭ. ಇದೇನು ಅಪರಾಧವಲ್ಲ’ ಎಂದರು.

ನೀತಿಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ಮಹಾರಾಷ್ಟ್ರದಲ್ಲಿ ಸಭೆ ನಡೆಸುತ್ತಿದ್ದೀರಾ? ಎಂಬ ಪತ್ರಕರ್ತರ ಪ್ರಶ್ನೆಗೆ, ‘ಇದಕ್ಕೆ ನಮ್ಮ ಬಳಿ ಉತ್ತರವಿಲ್ಲ’ ಎಂದರು. ‘ನೀವು ಇಲ್ಲಿಗೆ ಬಂದು ತೊಂದರೆ ಕೊಡುತ್ತಿದ್ದೀರಿ’ ಎಂದೂ ಮಾಧ್ಯಮದವರ ಮೇಲೆ ಹರಿಹಾಯ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.