ಬೀದರ್: ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ, ಬಿಜೆಪಿಯ ಕಮಲ ಚಿಹ್ನೆ ಹೊಂದಿರುವ ಟೀ ಶರ್ಟ್, ಟೋಪಿಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ ₹9.51 ಲಕ್ಷ ಎಂದು ಅಂದಾಜಿಸಲಾಗಿದೆ.

ಚುನಾವಣಾಧಿಕಾರಿಯಿಂದ ಅನುಮತಿ ಪಡೆಯದೇ ಟೀ ಶರ್ಟ್, ಟೋಪಿಗಳನ್ನು ಕಲಬುರಗಿಯಿಂದ ಬೀದರ್ ಕಡೆಗೆ ಮಂಗಳವಾರ ಸಾಗಿಸಲಾಗುತ್ತಿತ್ತು. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ತುಮಕುಂಟಾ ಚೆಕ್‌ಪೋಸ್ಟ್ ಬಳಿ ವಾಹನ ಪರಿಶೀಲಿಸಿದಾಗ ಪತ್ತೆಯಾಗಿವೆ. ಅನುಮತಿ ಪಡೆಯದ ಕಾರಣ ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ಪ್ರಚಾರಕ್ಕೆ ಸಾಮಗ್ರಿಗಳನ್ನು ಕೊಂಡೊಯ್ಯಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಚಿಂಚೋಳಿ ತಾಲ್ಲೂಕು ಬೀದರ್ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.