ಕೋಲಾರ: ‘ಈ ಬಾರಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ. ನಾನು ಕಾಂಗ್ರೆಸ್ ಶಾಸಕನಾದರೂ ನಿಜ ಮಾತನಾಡಬೇಕು. 2029ಕ್ಕೆ ಕಾಂಗ್ರೆಸ್ ಸರ್ಕಾರ ಬರಲಿದೆ’ ಎಂದು ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮತಗಟ್ಟೆ ಸಮೀಕ್ಷೆಯು ಬಿಜೆಪಿ ಎಂದು ಹೇಳುತ್ತಿದೆ. ಎಲ್ಲರ ರೀತಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ನಾನು ಸುಳ್ಳು ಹೇಳಲ್ಲ. ಬಿಜೆಪಿ ಅಧಿಕಾರ ಹಿಡಿಯುವ ಸಾಧ್ಯತೆ ಹೆಚ್ಚಿದೆ ಎಂಬುದು ಮೊದಲೇ ಗೊತ್ತಿದ್ದ ವಿಚಾರ. ಈ ಸಲ ಅವರೇ ಬರಲಿ. ನಮ್ಮ ಗುರಿ 2029ಕ್ಕೆ. ಮುಂದಿನ ಚುನಾವಣೆಯಲ್ಲಿ ಗೆಲ್ಲಲು ನಾವು ಈಗಿನಿಂದಲೇ ತಯಾರಿ ನಡೆಸುತ್ತೇವೆ’ ಎಂದರು.

‘ರಾಜ್ಯದಲ್ಲಿ 50: 50ಇದೆ. ಕೋಲಾರ ಕ್ಷೇತ್ರದಲ್ಲಿ ನಾವು 29 ಸಾವಿರ ಮತಗಳಿಂದ ಗೆಲ್ಲುತ್ತೇವೆ’ ಎಂದು ಹೇಳಿದರು.

ಕೆ.ಆರ್.ರಮೇಶ್ ಕುಮಾರ್ ಅವರಿಗೆ ಮೇಲ್ಮನೆ ಅವಕಾಶ ಕೈತಪ್ಪಿದ್ದರ ಬಗ್ಗೆ ಪ್ರತಿಕ್ರಿಯಿಸಿ, ‘ರಮೇಶ್ ಕುಮಾರ್ ಅವರೇನೂ ತಮಗೆ ಪರಿಷತ್ ಸದಸ್ಯ ಸ್ಥಾನ ಬೇಕೆಂದು ಕೇಳಿಲ್ಲ. ನಾವೆಲ್ಲಾ ಶಾಸಕರು ಪ್ರಯತ್ನ ನಡೆಸಿದೆವು. ಆದರೆ, ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಒಳ್ಳೆಯ ಅವಕಾಶ ಸಿಗಲಿದೆ’ ಎಂದರು.

‘ಮುಂದಿನ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಆದಾಗ ಜಿಲ್ಲೆಗೆ ಸಚಿವ ಸ್ಥಾನ ಸಿಗಬಹುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.