ಶಿವಮೊಗ್ಗ: ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತದಿಂದ ಶೀಘ್ರ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ ಎಂದು ಸೋಮವಾರ ಇಲ್ಲಿ ಸುದ್ದಿ ಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.

ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಲ್ಲಿ ನನಗೆ ಅವಕಾಶ ಸಿಗುವ ಸಾಧ್ಯತೆ ಇಲ್ಲ. ಆದರೂ ಕಣದಿಂದ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ ಅವರು, ಕಾಂಗ್ರೆಸ್ ಸೇರುವ ವಿಚಾರದಲ್ಲಿ ಪ್ರತಿಕ್ರಿಯಿಸಲು ನಿರಾಕರಿಸಿದರು.

ಈಶ್ವರಪ್ಪ ಹಾಗೂ ಅವರ ಪುತ್ರ ಯಾರೇ ನಿಂತರೂ ಸ್ಪರ್ಧೆ ಮಾಡುವೆ ಎಂದು ತಿಳಿಸಿದರು.

ಚುನಾವಣೆಯಲ್ಲಿ ಕಣಕ್ಕೆ ಇಳಿಯಬೇಕೆಂಬ ಕಾರಣಕ್ಕೆ ನನ್ನ ಭಾವನೆಯನ್ನ ಈ ಹಿಂದೆ ಪ್ರಕಟಿಸಿದ್ದೇನೆ. ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದೆ. ಅದರೆ ಪಕ್ಷದಿಂದ ನನಗೆ ಟಿಕೆಟ್ ಸಿಗುವ ಲಕ್ಷಣಗಳು ಕಾಣುತ್ತಿಲ್ಲ ಎಂದರು.

ಬಿಜೆಪಿ ಪಕ್ಷದ ಬಗ್ಗೆ ನನಗೆ ಆಕ್ಷೇಪವಿಲ್ಲ. ಆದರೆ ನಾಯಕರ ವಿರುದ್ಧವಿದೆ. ಬಿ.ಎಸ್.ಯಡಿಯೂರಪ್ಪ ಪುತ್ರರನ್ನ ರಾಜಕೀಯಕ್ಕೆ ಕರೆತಂದಾಗ ವಿರೋಧಿಸಿದ್ದ ಈಶ್ವರಪ್ಪ ಈಗ ತಮ್ಮ ಮಗನನ್ನ ಚುನಾವಣೆ ರಾಜಕೀಯಕ್ಕೆ ಕರೆತರುವ ಪ್ರಯತ್ನ ಮಾಡುತ್ತಿರುವುದು ಏಕೆ ಎಂದು ವಾಗ್ದಾಳಿ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.