ಬೆಂಗಳೂರು: ‘ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ಶಾಸಕಾಂಗ ಸಭೆಯಲ್ಲಿ ಬೆಳಿಗ್ಗೆ ನಿರ್ಣಯ ಮಾಡಿದಂತೆ ಸರ್ಕಾರ ರಚಿಸಲು ಜೆಡಿಎಸ್ಗೆ ಕಾಂಗ್ರೆಸ್ ಬೆಂಬಲ ನೀಡಲಿದೆ. ಆ ನಿರ್ಣಯವನ್ನು ರಾಜ್ಯಪಾಲರಿಗೆ ತಿಳಿಸಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಹೇಳಿದರು.

ಬುಧವಾರ ಸಂಜೆ ರಾಜಭವನದಲ್ಲಿ ರಾಜ್ಯಪಾಲರ ಭೇಟಿ ನಂತರ ಅವರು ಮಾತನಾಡಿದರು.

ಸುಪ್ರೀಂಕೊರ್ಟ್ ನಿರ್ದೇಶನದಂತೆ ರಾಜ್ಯಪಾಲರು ಸಾಂವಿಧಾನಿಕವಾಗಿ ತೀರ್ಮಾನ ತೆಗೆದುಕೊಳ್ಳುವುದಾಗಿ ಭರವಸೆ ನೀಡಿರುವುದಾಗಿ ತಿಳಿಸಿದರು.

‘ಕಾಂಗ್ರೆಸ್–ಜೆಡಿಎಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಣಯದಂತೆ ಸರ್ಕಾರ ರಚನೆಗೆ ಎರಡು ಪಕ್ಷದ ಒಮ್ಮತವನ್ನು ರಾಜ್ಯಪಾಲರಿಗೆ ತಿಳಿಸಿದ್ದೇವೆ.

117 ಶಾಸಕರ ಸಹಿಯನ್ನು ಒಳಗೊಂಡ ಪಟ್ಟಿಯನ್ನು ರಾಜ್ಯಪಾಲರಿಗೆ ನೀಡಿದ್ದೇವೆ. ಎರಡೂ ಪಕ್ಷಗಳ ಮನವಿಯನ್ನು ಸ್ವೀಕರಿಸಿದ್ದು, ಗೋವಾ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶವನ್ನೂ ಪರಿಗಣಿಸಿ ತೀರ್ಮಾನ ಕೈಗೊಳ್ಳುತ್ತೇನೆ’ ಎಂದು ರಾಜ್ಯಪಾಲರು ಭರವಸೆ ನೀಡಿರುವುದಾಗಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.