ಉಡುಪಿ: ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶ ಹೊಂದಿರುವ ಚುನಾವಣಾ ಆಯೋಗವು ಚುನಾವಣಾ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ತಡೆಗೆ ಸೀ ವಿಜಲ್ ಆ್ಯಪ್ ಬಿಡುಗಡೆಮಾಡಿದ್ದು ಸಾರ್ವಜನಿಕರು ಪ್ರಯೋಜನ ಪಡೆದುಕೊಳ್ಳಬಹುದು.

ಚುನಾವಣೆಯ ಸಂದರ್ಭಗಳಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ವ್ಯಕ್ತಿಗೆ ಅಥವಾ ಪಕ್ಷಕ್ಕೆ ಮತ ಹಾಕುವಂತೆ ಆಮಿಷಗಳನ್ನು ಒಡ್ಡಿದರೆ, ಹಣ, ಉಡುಗೊರೆ, ಕೂಪನ್‌ಗಳನ್ನು ವಿತರಣೆ, ಮದ್ಯದ ಆಸೆ ಮತದಾರರು ಸೀ ವಿಜಿಲ್ ಆ್ಯಪ್ ಮೂಲಕ ದೂರು ನೀಡಬಹುದು.

ಜತೆಗೆ ಮತದಾರರಿಗೆ ಅನುಮತಿ ಇಲ್ಲದಿದ್ದರೂ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಅಂಟಿಸುವುದು, ಬಂದೂಕು ತೋರಿಸಿ ಬೆದರಿಕೆ ಹಾಕುವುದು, ಆಸ್ತಿ ವಿರೂಪಗೊಳಿಸುವುದು, ಧಾರ್ಮಿಕ ಅಥವಾ ಕೋಮು ಪ್ರಚೋದಿತ ಭಾಷಣ ಮಾಡಿದರೂ ಆ್ಯಪ್ ಮೂಲಕ ದೂರು ನೀಡಬಹುದು.

ಮತಗಟ್ಟೆಯ 200 ಮೀಟರ್ ಪ್ರದೇಶದಲ್ಲಿ ನಿಷೇಧವಿದ್ದರೂ ಪ್ರಚಾರ ಮಾಡುವುದು, ಮತದಾನದ ದಿನ ವಾಹನಗಳಲ್ಲಿ ಮತದಾರರನ್ನು ಕರೆತಂದು ಪ್ರಲೋಭನೆಗೊಳಿಸುವುದು, ಮತ ಹಾಕುವಂತೆ ಬೆದರಿಸುವುದು ಹಾಗೂ ನೀತಿ ಸಂಹಿತೆ ಪ್ರಕರಣಗಳು ಕಂಡುಬಂದರೂ ಸಿ ವಿಜಿಲ್ ಆ್ಯಪ್‌ನಲ್ಲಿ ದೂರು ಸಲ್ಲಿಸಲು ಅವಕಾಶವಿದೆ.

ಸಿ ವಿಜಲ್ ಮೂಲಕ ಸಲ್ಲಿಕೆಯಾಗುವ ದೂರುಗಳಿಂದ ಘಟನೆ ನಡೆದ ಸ್ಥಳದ ಮಾಹಿತಿ ಲಭ್ಯವಾಗುವುದರಿಂದ ಪ್ರಕರಣ ನಡೆದ ಸ್ಥಳಕ್ಕೆ ಅಧಿಕಾರಿಗಳು ತಲುಪಬಹುದು.

ಸಾರ್ವಜನಿಕರು ಪ್ಲೇ ಸ್ಟೋರ್‌ನಲ್ಲಿ ಸಿ ವಿಜಿಲ್ ಆ್ಯಪ್ ಡೌನ್ ಲೋಡ್ ಮಾಡಿಕೊಂಡು ಬಳಸಬಹುದು. ಅಕ್ರಮಗಳ ಕುರಿತು ಛಾಯಾಚಿತ್ರ ಹಾಗೂ ವೀಡಿಯೋಗಳನ್ನು ಅಪ್‌ಲೋಡ್ ಮಾಡಬಹುದು. ದೂರು ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಡಲಾಗುವುದು ಎನ್ನುತ್ತಾರೆ ಅಧಿಕಾರಿಗಳು.

ಸಿ ವಿಜಿಲ್‌ನಲ್ಲಿ ದಾಖಲಾಗುವ ದೂರುಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಕಚೇರಿ, ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿ ಕಚೇರಿಗಳಲ್ಲಿ ಪ್ರತ್ಯೇಕ ಸಿಬ್ಬಂದಿಗಳಿದ್ದಾರೆ. ಮತದಾನ ಮುಕ್ತಾಯವಾಗುವರೆಗೂ 3 ಪಾಳಿಯಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.

ದೂರು ದಾಖಲಾದ ಕೂಡಲೇ ಪರಿಶೀಲಿಸಿ ದೂರು ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಪ್ರಕರಣದ ಸಂಪೂರ್ಣ ವಿವರ ರವಾನಿಸಿ ದೂರಿನ ಕುರಿತು ತುರ್ತು ಕ್ರಮ ವಹಿಸುವಂತೆ ನೋಡಿಕೊಳ್ಳಲಾಗುತ್ತದೆ. ಗರಿಷ್ಠ 100 ನಿಮಿಷಗಳ ಒಳಗೆ ದೂರುಗಳನ್ನು ಇತ್ಯರ್ಥಪಡಿಸಲಾಗುತ್ತದೆ.

ಸಾರ್ವಜನಿಕರು ಸಿ ವಿಜಿಲ್ ಆ್ಯಪ್ ಮಾತ್ರವಲ್ಲದೆ ಉಚಿತ ಸಹಾಯವಾಣಿ ಸಂಖ್ಯೆ 1950ಗೆ ಕರೆಮಾಡಿ ಚುನಾವಣಾ ಅಕ್ರಮಗಳ ಬಗ್ಗೆ ದೂರು ನೀಡಬಹುದು. ಈ ಮೂಲಕ ಮುಕ್ತ , ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯಲು ಚುನಾವಣಾ ಆಯೋಗದೊಂದಿಗೆ ಕೈ ಜೋಡಿಸಬಹುದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.