ಮಂಡ್ಯ: ‘ನಾಯ್ಡು ಜನಾಂಗದವರು ಬೆಂಗಳೂರನ್ನು ವ್ಯಾಪಿಸಿಕೊಂಡಿದ್ದಾರೆ. ಅದೇರೀತಿ ಮಂಡ್ಯವನ್ನೂ ನಾಯ್ಡುಮಯಗೊಳಿಸಲು ಹೊರಟಿದ್ದಾರೆ. ರಾಕ್ಲೈನ್ ವೆಂಕಟೇಶ್ ಕೂಡ ನಾಯ್ಡು ಜನಾಂಗದವರು. ಜಿಲ್ಲೆಗೆ ಅವರ ಕೊಡುಗೆ ಏನು ಎಂಬುದನ್ನು ಉತ್ತರಿಸಬೇಕು‘ ಎಂದು ಸಂಸದ ಎಲ್.ಆರ್.ಶಿವರಾಮೇಗೌಡ ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದರು.

‘ಅಂಬರೀಷ್ ಅಂತರ್ಜಾತಿ ವಿವಾಹವಾಗಿದ್ದರು. ಅವರನ್ನು ಮದುವೆಯಾದ ಮಾತ್ರಕ್ಕೆ ನಾಯ್ಡು ಜನಾಂಗಕ್ಕೆ ಸೇರಿದ ಸುಮಲತಾ ಗೌಡ್ತಿ ಆಗುವುದಿಲ್ಲ. ಅವರ ಜಾತಿ ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ. ಆಕೆ ಯಾವ ಥರದ ಗೌಡ್ತಿ ಎಂಬುದನ್ನು ಜನರಿಗೆ ತಿಳಿಸಬೇಕು. ಸುಮಲತಾ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಆರೋಪ ಮಾಡಿದರೆ ನಾವು ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ’ ಎಂದು ವಾಗ್ದಾಳಿ ನಡೆಸಿದರು.

ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು ‘ನೀವು ಪಿಚ್ಚರ್ಗೆ ಮಾತ್ರ ಸೀಮಿತವಾಗಿರಬೇಕು. ಜೆಡಿಎಸ್ ವಿರುದ್ಧ, ಒಕ್ಕಲಿಗ ಸಮುದಾಯದ ವಿರುದ್ಧ ತೊಡೆ ತಟ್ಟಿದರೆ ನಾವು ಸುಮ್ಮನೆ ಇರುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.