ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೊ ಪ್ರಕರಣದ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಪೊಲೀಸರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ದೆಹಲಿ ಪೊಲೀಸರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಆರೋಪಿಯನ್ನು ಬಂಧಿಸಿದ್ದಕ್ಕಾಗಿ ಧನ್ಯವಾದಗಳು. ಪ್ರೀತಿಯಿಂದ, ಬೆಂಬಲದಿಂದ ಮತ್ತು ನನ್ನನ್ನು ರಕ್ಷಿಸುವ ಸಮುದಾಯಕ್ಕೆ ನಿಜವಾಗಿಯೂ ಕೃತಜ್ಞರಾಗಿರುತ್ತೇನೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಂತ್ರಜ್ಞಾನದ ದುರ್ಬಳಕೆ ಕುರಿತಂತೆ ಚರ್ಚೆ ಹುಟ್ಟುಹಾಕಿದ್ದ ಘಟನೆ ಹಿಂದಿನ ಆರೋಪಿಯನ್ನು ಆಂಧ್ರಪ್ರದೇಶದಲ್ಲಿ ಶನಿವಾರ ಬಂಧಿಸಲಾಗಿದೆ. ಡಿಜಿಟಲ್ ಮಾರ್ಕೆಟರ್ ಈಮಣಿ ನವೀನ್ ಬಂಧಿತ ಆರೋಪಿ.

ಇನ್‌ಸ್ಟಾಗ್ರಾಮ್‌ನಲ್ಲಿ ಫಾಲೋವರ್‌ಗಳ ಸಂಖ್ಯೆ ಹೆಚ್ಚಿಸಿಕೊಳ್ಳಲು ಈ ವಿಡಿಯೋ ಸೃಷ್ಟಿಸಿದ್ದಾಗಿ ಆರೋಪಿ ವಿಚಾರಣೆಯ ವೇಳೆ ಹೇಳಿದ್ದಾನೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಎಐ ಸಹಾಯದಿಂದ ಸೃಷ್ಟಿಸಲಾದ ರಶ್ಮಿಕಾ ಮಾದಣ್ಣ ಅವರ ಡೀಪ್‌ಫೇಕ್ ವಿಡಿಯೊ ಕಳೆದ ವರ್ಷ ನವೆಂಬರ್‌ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ನಟಿಯ ಅಭಿಮಾನಿ ಎಂದು ಹೇಳಿಕೊಂಡ ನವೀನ್ ಸೃಷ್ಟಿಸಿದ್ದ, ಈ ವಿಡಿಯೊ ದೇಶದಾದ್ಯಂತ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿತ್ತು.

ಮೂಲ ವಿಡಿಯೊವನ್ನು ಬ್ರಿಟಿಷ್ ಭಾರತೀಯ ಮೂಲದ ಝರಾ ಪಟೇಲ್ ಅವರು 2023ರ ಅಕ್ಟೋಬರ್ 9 ರಂದು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದರು. ನಂತರ ಅದನ್ನು ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೊವನ್ನು ರಚಿಸಲಾಗಿತ್ತು.
.Deepfake Video | ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೊ ಪ್ರಕರಣ: ವ್ಯಕ್ತಿ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.