ಬೆಂಗಳೂರು: ಸೂಪರ್ ಸ್ಟಾರ್ ರಜನೀಕಾಂತ್ ಹಾಗೂ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ‘2.0’ ಚಿತ್ರದ ಟ್ರೇಲರ್ ಶನಿವಾರ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.

ಚಿತ್ರ ನವೆಂಬರ್ 29ಕ್ಕೆ ವಿಶ್ವದಾದ್ಯಂತ ತೆರೆಕಾಣಲಿದೆ. ‘2.0’ ಮೇಲಿನ ನಿರೀಕ್ಷೆಯನ್ನು ಹಾಗೆಯೇ ಉಳಿಸಿಕೊಳ್ಳುವ ಸಲುವಾಗಿ ಈಚೆಗೆ ಚಿತ್ರದ ಟೀಸರ್ ಬಿಡುಗಡೆ ಮಾಡಿತ್ತು. ಅದಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಚಿತ್ರದ ಪೋಸ್ಟರ್ ಹಾಗೂ ಟೀಸರ್ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಸೂಪರ್ ವಿಲನ್ ಪಾತ್ರದಲ್ಲಿ ಅಕ್ಷಯ್ ಕಾಣಿಸಿಕೊಳ್ಳುತ್ತಿದ್ದು, ಅವರು ಮೊಬೈಲ್ ಫೋನ್ಗಳ ಮೇಲೆ ನಿಯಂತ್ರಣ ಸಾಧಿಸಬಹುದಾದ ಅತಿಮಾನುಷ ಶಕ್ತಿ ಹೊಂದಿರುತ್ತಾರೆ. ಅದನ್ನು ಚಿಟ್ಟಿ (ರಜನಿಕಾಂತ್– ರೋಬೊ ಚಿತ್ರದ ಪಾತ್ರ) ನಿಯಂತ್ರಿಸುತ್ತಾರೆ ಎಂಬುದನ್ನು ಟ್ರೇಲರ್ನಲ್ಲಿ ಸೂಕ್ಷ್ಮವಾಗಿ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.