ಬೆಳಗಾವಿ: ‘ಬ್ಯಾಡ್‌ಮ್ಯಾನರ್ಸ್’ ಚಲನಚಿತ್ರ ನ.24ರಂದು ರಾಜ್ಯದಾದ್ಯಂತ 300 ಚಿತ್ರ ಮಂದಿರಗಳಲ್ಲಿ ಏಕಕಾಲಕ್ಕೆ ತೆರೆಕಾಣಲಿದೆ ಎಂದು ನಟ ಅಭಿಷೇಕ್ ಅಂಬರೀಷ್ ಹೇಳಿದರು.

ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದುನಿಯಾ ಸೂರಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾ ಆ್ಯಕ್ಷನ್ ಆಧಾರಿತವಾಗಿದ್ದು, ಬೆಂಗಳೂರು, ಮೈಸೂರು ಮತ್ತಿತರ ಕಡೆ ಚಿತ್ರೀಕರಣಗೊಂಡಿದೆ. ಈ ಚಿತ್ರದ ಪ್ರಚಾರಕ್ಕಾಗಿ ಬೆಳಗಾವಿಗೆ ಬಂದಿದ್ದೇನೆ’ ಎಂದು ತಿಳಿಸಿದರು.
.ಸಂಸದೆ ಸುಮಲತಾ ಅಂಬರೀಷ್, ಅಭಿಷೇಕ್ ಹೆಸರಲ್ಲಿ ತುಲಾಭಾರ ಸಲ್ಲಿಸಿದ ಅಭಿಮಾನಿ.PHOTOS: ಅಭಿಷೇಕ್ ಅಂಬರೀಷ್– ಅವಿವಾ ವಿವಾಹ| ರಜನಿ ಕಾಂತ್, ಮೋಹನ್ ಬಾಬು ಭಾಗಿ .
‘ಇತ್ತೀಚಿನ ವರ್ಷಗಳಲ್ಲಿ ದೊಡ್ಡ ಬಜೆಟ್‌ನ ಸಿನಿಮಾಗಳಿಗೆ ಮಾತ್ರ ಯಶಸ್ಸು ಸಿಕ್ಕಿಲ್ಲ. ಸಣ್ಣ ಬಜೆಟ್‌ನ ಹಲವು ಚಿತ್ರಗಳೂ ಪ್ರೇಕ್ಷಕರ ಮನಗೆದ್ದಿವೆ. ಈ ಚಿತ್ರಕ್ಕೂ ಉತ್ತಮ ಸ್ಪಂದನೆ ಸಿಗುತ್ತದೆ ಎನ್ನುವ ಸಂಪೂರ್ಣ ವಿಶ್ವಾಸವಿದೆ. ಈ ಭಾಗದ ಜನರೂ ಸಿನಿಮಾ ವೀಕ್ಷಿಸಿ ಪ್ರೋತ್ಸಾಹಿಸಬೇಕು’ ಎಂದು ಕೋರಿದರು.

‘ಕಾವೇರಿಗಾಗಿ ಬೆಂಗಳೂರು, ಮೈಸೂರಿನಲ್ಲಿ ನಡೆಯುವ ಹೋರಾಟಗಳಲ್ಲಿ ಭಾಗವಹಿಸಲು ನಮಗೆ ವೇದಿಕೆ ಸಿಕ್ಕಿದೆ. ಆದರೆ, ಮಾಹಿತಿ ಕೊರತೆಯಿಂದಾಗಿ ಈ ಭಾಗದಲ್ಲಿ ನಡೆದ ಮಹದಾಯಿ ಹೋರಾಟದಲ್ಲಿ ಭಾಗವಹಿಸಲು ಆಗಿಲ್ಲ. ಉತ್ತರ ಕರ್ನಾಟಕದ ಜನರು ನಮ್ಮನ್ನು ಪ್ರೀತಿಸುತ್ತಾರೆ. ನಾವೂ ಅವರನ್ನು ಪ್ರೀತಿಸುತ್ತೇವೆ. ಇಲ್ಲಿನ ಹೋರಾಟಗಾರರು ಮಾಹಿತಿ ಕೊಟ್ಟರೆ, ಉತ್ತರ ಕರ್ನಾಟಕದಲ್ಲಿ ನಡೆಯುವ ಹೋರಾಟಗಳಲ್ಲೂ ಭಾಗವಹಿಸುತ್ತೇವೆ. ಅವರ ಪರವಾಗಿ ಧ್ವನಿ ಎತ್ತುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜವೀರ ಹಿರೇಮಠ, ವಿಜಯಕುಮಾರ ಇತರರಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.