ಬಿಗ್‌ಬಾಸ್ ಖ್ಯಾತಿಯ ಚಂದನ್ ಆಚಾರ್ ಅಭಿನಯದ ‘ಮಂಗಳವಾರ ರಜಾದಿನ’ ಚಿತ್ರದ ‘ನೀನೆ ಗುರು, ನೀನೆ ಗುರಿ, ನೀನೆ ಗುರುತು’ ಹಾಡನ್ನು ನಟ ಅಭಿಷೇಕ್ ಅಂಬರೀಶ್ ಗಣರಾಜ್ಯೋತ್ಸವದ ದಿನ ಬಿಡುಗಡೆ ಮಾಡಿದ್ದಾರೆ.

ತಂದೆ–ಮಗನ ಭಾಂದವ್ಯದ ಈ ಹಾಡನ್ನು ಗೌಸ್‌ಫೀರ್ ಬರೆದಿದ್ದಾರೆ. ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಹಾಡಿಗೆ ದನಿಯಾಗಿದ್ದಾರೆ.

‘ಈ ಹಾಡು ಕೇಳಿದ ಎಲ್ಲರಿಗೂ ಅವರ ತಂದೆ ನೆನಪಾಗುತ್ತಾರೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಕೋರಿದ್ದಾರೆ.

ತ್ರಿವರ್ಗ ಫಿಲಂಸ್ ನಿರ್ಮಾಣದ, ಯುವಿನ್ ನಿರ್ದೇಶಿಸಿರುವ ಈ ಚಿತ್ರ ಇದೇ ಫೆಬ್ರವರಿ 5 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಲಹರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಹಾಡಿಗೆ ಋತ್ವಿಕ್ ಮುರಳಿಧರ್ ಸಂಗೀತ ನೀಡಿದ್ದು, ಈಗಾಗಲೇ ಅಪಾರ ಸಂಖ್ಯೆಯಲ್ಲಿ ವೀಕ್ಷಣೆಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.