ರಾಂಚಿ: ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಅಮೀಶಾ ಪಟೇಲ್ ಅವರು ಶನಿವಾರ ರಾಂಚಿ ಸಿವಿಲ್ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.

ವಿಚಾರಣೆ ನಡೆಸಿದ ನ್ಯಾಯಾಧೀಶ ಡಿಎನ್ ಶುಕ್ಲಾ, ಅಮೀಶಾ ಪಟೇಲ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಜೂನ್ 21 ರಂದು ಮತ್ತೆ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

2018ರಲ್ಲಿ ಜಾರ್ಖಂಡ್ ಮೂಲದ ಚಿತ್ರ ನಿರ್ಮಾಪಕ ಅಜಯ್ ಕುಮಾರ್ ಸಿಂಗ್ ಅಮೀಶಾ ಪಟೇಲ್ ವಿರುದ್ಧ ವಂಚನೆ ಮತ್ತು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.

'ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ನ್ಯಾಯಾಲಯ ಹಲವು ಬಾರಿ ಸಮನ್ಸ್ ಜಾರಿ ನೀಡಿದ್ದರೂ ಅಮೀಶಾ ಪಟೇಲ್ ಅವರು ಹಾಜರಾಗಿರಲಿಲ್ಲ. ನಂತರ ನ್ಯಾಯಾಲಯ ನಟಿಯ ವಿರುದ್ಧ ವಾರೆಂಟ್ ಹೊರಡಿಸಿತ್ತು' ಎಂದು ಅಜಯ್ ಕುಮಾರ್ ಸಿಂಗ್ ಪರ ವಕೀಲರು ಹೇಳಿದ್ದಾರೆ.

ಏನಿದು ಪ್ರಕರಣ?

ನಿರ್ಮಾಪಕ ಅಜಯ್ ಕುಮಾರ್ ಸಿಂಗ್ ಅವರು 'ದೇಸಿ ಮ್ಯಾಜಿಕ್' ಎಂಬ ಹೆಸರಿನ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದು, ಈ ಚಿತ್ರಕ್ಕಾಗಿ ನಟಿ ಅಮೀಶಾ ಪಟೇಲ್ ಅವರಿಗೆ ₹2.5 ಕೋಟಿ ಹಣವನ್ನು ನೀಡಿದ್ದರು. ಅಮೀಶಾ ಪಟೇಲ್ ಅವರು ಚಿತ್ರದಲ್ಲಿ ನಟಿಸದ ಕಾರಣ ಹಣ ವಾಪಾಸ್ಸು ಮಾಡಲು ತಿಳಿಸಿದ್ದರು. ಅಮೀಶಾ ಪಟೇಲ್ ಅವರು ₹2.5 ಕೋಟಿ ಚೆಕ್ ಕಳುಹಿಸಿದ್ದರೂ ಅದು ಬೌನ್ಸ್ ಆಗಿತ್ತು. ಈ ಸಂಬಂಧ ಇಬ್ಬರ ನಡುವೆ ಜಟಾಪಟಿ ನಡೆದು ಕೊನೆಗೆ ಪ್ರಕರಣ ಕೋರ್ಟ್ ಮೇಟ್ಟಿಲೇರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.