ನವದೆಹಲಿ: ನಟಿ, ಬಿಜೆಪಿ ಸಂಸದೆ ಕಂಗನಾ ರನೌತ್ ನಟನೆಯ ಬಹುನಿರೀಕ್ಷಿತ 'ಎಮರ್ಜೆನ್ಸಿ' ಚಿತ್ರಕ್ಕೆ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್ಸಿ) ಪ್ರಮಾಣಪತ್ರ ನೀಡಿದೆ.

ಈ ವಿಚಾರವನ್ನು ಕಂಗನಾ ಅವರು ಸಾಮಾಜಿಕ ಮಾಧ್ಯಮ ಎಕ್ಸ್/ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.

'ನಮ್ಮ ಸಿನಿಮಾ ಎಮರ್ಜೆನ್ಸಿಗೆ ಸೆನ್ಸಾರ್ ಪ್ರಮಾಣಪತ್ರ ಸ್ವೀಕರಿಸಿದ್ದೇವೆ ಎಂದು ತಿಳಿಸಲು ಸಂತಸವೆನಿಸುತ್ತಿದೆ. ಶೀಘ್ರದಲ್ಲೇ ಬಿಡುಗಡೆ ದಿನಾಂಕ ಪ್ರಕಟಿಸುತ್ತೇವೆ. ತಾಳ್ಮೆಯಿಂದ ಕಾದಿದ್ದಕ್ಕೆ ಮತ್ತು ಬೆಂಬಲಿಸಿದ್ದಕ್ಕೆ ಧನ್ಯವಾದಗಳು' ಎಂದು ಹೇಳಿದ್ದಾರೆ.

ಈ ಚಿತ್ರ ಸೆಪ್ಟೆಂಬರ್ 6ರಂದೇ ತೆರೆಕಾಣಬೇಕಿತ್ತು. ಆದರೆ, ಸೆನ್ಸಾರ್ ಮಂಡಳಿಯಿಂದ ಬಿಡುಗಡೆಗೆ ಅನುಮತಿ ದೊರೆಯದ ಕಾರಣ ಅದು ಸಾಧ್ಯವಾಗಿರಲಿಲ್ಲ.

ಚಿತ್ರದಲ್ಲಿ ಸಿಖ್ ಸಮುದಾಯದ ಬಗೆಗಿನ ನಿರೂಪಣೆ ಸೂಕ್ತವಾಗಿಲ್ಲ. ಐತಿಹಾಸಿಕ ಸಂಗತಿಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಶಿರೋಮಣಿ ಅಕಾಲಿ ದಳ ಸೇರಿದಂತೆ ಕೆಲ ಸಿಖ್ ಸಂಘಟನೆಗಳು ಸಿನಿಮಾ ಬಿಡುಗಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದವು.

ಹೀಗಾಗಿ, ಸಿನಿಮಾದಲ್ಲಿ ಕೆಲವು ಭಾಗಗಳಿಗೆ ಕತ್ತರಿ ಹಾಕಲು ಕಂಗನಾ ಒಪ್ಪಿದ್ದರು.

ಮಾಜಿ ಪ್ರಧಾನಿ, ದಿವಂಗತ ಇಂದಿರಾ ಗಾಂಧಿ ಜೀವನಾಧಾರಿತ ಈ ಸಿನಿಮಾಗೆ ಕಥೆ ಬರೆದು ನಿರ್ದೇಶನದ ಹೊಣೆ ನಿಭಾಯಿಸಿರುವ ಕಂಗನಾ, ಮುಖ್ಯಪಾತ್ರದಲ್ಲಿಯೂ ಕಾಣಿಸಿಕೊಂಡಿಸಿಕೊಂಡಿದ್ದಾರೆ. ಸಹ ನಿರ್ಮಾಪಕಿಯಾಗಿ ಬಂಡವಾಳವನ್ನೂ ಹೂಡಿದ್ದಾರೆ.
.‘ಎಮರ್ಜೆನ್ಸಿ’ ಚಿತ್ರದ ಕೆಲ ಭಾಗಗಳ ಕಡಿತಕ್ಕೆ ಕಂಗನಾ ಒಪ್ಪಿಗೆ: ಹೈಕೋರ್ಟ್ಗೆ CBFC.‘ಎಮರ್ಜೆನ್ಸಿ’ ಚಿತ್ರಕ್ಕೆ ಕತ್ತರಿ ಹಾಕಲು ಒಪ್ಪಿಗೆ: ಹೈಕೋರ್ಟ್ಗೆ ಜೀ ಹೇಳಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.