ಬೆಂಗಳೂರು: ‘ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುತ್ತೇನೆ’ ಎಂದು ಚಿತ್ರನಟ ಸುದೀಪ್ ಹೇಳಿದರು.

ಪಶುಸಂಗೋಪನೆ ಸಚಿವ ಪ್ರಭು ಬಿ. ಚವ್ಹಾಣ್ ಜೊತೆ ಗುರುವಾರ ತಮ್ಮ ನಿವಾಸದಲ್ಲಿ ಗೋಪೂಜೆ ನೆರವೇರಿಸಿ ಮಾತನಾಡಿದ ಸುದೀಪ್, ‘ರಾಜ್ಯ ಸರ್ಕಾರ ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ. ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿ ಹೆಚ್ಚಿಸಿದೆ‘ ಎಂದರು.

ಇದೇ ಸಂದರ್ಭದಲ್ಲಿ ಸುದೀಪ್ ಅವರಿಗೆ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ನೇಮಕಾತಿ ಪತ್ರ ವಿತರಿಸಿ, ನೆನಪಿನ ಕಾಣಿಕೆ ನೀಡಿ ಸಚಿವರು ಸನ್ಮಾನಿಸಿದರು.

‘ಸಾರ್ವಜನಿಕರು, ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು’ ಎಂದು ಸುದೀಪ್ ಮನವಿ ಮಾಡಿದರು.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಜನ್ಮಹಬ್ಬದಂದು 11 ಗೋವು ದತ್ತು ಪಡೆದು, ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದರು. ನಾನು ಕೂಡ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆದಿದ್ದೇನೆ ಎಂದು ಸಚಿವ ಪ್ರಭು ಚವ್ಹಾಣ್ ಅವರು ವಿವರಿಸಿದಾಗ ನಾನು ಕೂಡ ನಿಮ್ಮಂತೆ ದತ್ತು ಪಡೆಯುತ್ತಿದ್ದೇನೆ’ ಎಂದು ಸಚಿವರಿಗೆ ಸುದೀಪ್ ತಿಳಿಸಿದರು.

‘ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದ ನಂತರ 100 ಸರ್ಕಾರಿ ಗೋಶಾಲೆ ಸ್ಥಾಪಿಸಲಾಗುತ್ತಿದೆ. ರಾಷ್ಟ್ರದಲ್ಲಿಯೇ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ. ಪ್ರಾಣಿ ಕಲ್ಯಾಣ ಮಂಡಳಿ, ಪ್ರಾಣಿ ಸಹಾಯವಾಣಿ ಕೇಂದ್ರ, ಪಶು ಸಂಜೀವಿನಿ ಆ್ಯಂಬುಲೆನ್ಸ್, ಗೋಮಾತಾ ಸಹಕಾರ ಸಂಘ, ಆತ್ಮ ನಿರ್ಭರ ಗೋಶಾಲೆ ಸ್ಥಾಪನೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ’ ಎಂದು ಸಚಿವರು ತಿಳಿಸಿದರು.

‘ಜಾನುವಾರುಗಳ ದತ್ತು ಯೋಜನೆಯಡಿ ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳ ಪ್ರತಿ ಜಾನುವಾರಿಗೆ ವಾರ್ಷಿಕ ₹ 11,000, ಜಾನುವಾರುಗಳಿಗಾಗಿ ಆಹಾರ ಪೂರೈಕೆಗೆ ಯೋಜನೆಯಡಿ ಸಾರ್ವಜನಿಕರು ತಮ್ಮ ಜೀವನದ ವಿಶೇಷ ಸಂದರ್ಭಗಳಲ್ಲಿ (ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಇತ್ಯಾದಿ) ರಾಸುಗಳಿಗೆ ಒಂದು ದಿನಕ್ಕೆ ₹ 70, ಗೋಶಾಲೆಗಳಿಗೆ ದೇಣಿಗೆ ಮತ್ತು ಗೋಶಾಲೆ ನಿರ್ವಹಣೆ ಯೋಜನೆಯಡಿ ಸಾರ್ವಜನಿಕರು ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳಿಗೆ ಕನಿಷ್ಠ ₹10ರಿಂದ ತಮ್ಮ ಶಕ್ತಾನುಸಾರ ಎಷ್ಟು ಬೇಕಾದರೂ ಮೂಲಸೌಕರ್ಯ ಹಾಗೂ ಇತರೆ ವೆಚ್ಚಗಳಿಗಾಗಿ ದೇಣಿಗೆ ನೀಡಬಹುದು. ಈ ಯೋಜನೆಗೆ 80 ಜಿ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ’ ಎಂದು ಸಚಿವರು ವಿವರಿಸಿದರು.

‘ಗೋಶಾಲೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಿ, ಸಾರ್ವಜನಿಕರ ಸಹಕಾರದಿಂದ ಯಾವುದೇ ಅಡಚಣೆಯಿಲ್ಲದೇ ನಡೆಸುವುದು ಈ ಯೋಜನೆ ಉದ್ದೇಶ. ಗೋವು ದತ್ತು, ಗೋಶಾಲೆಗೆ ದೇಣಿಗೆ ಮತ್ತು ಜಾನುವಾರುಗಳಿಗೆ ಆಹಾರ ಯೋಜನೆಯಡಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಗೋವುಗಳ ಪಾಲನೆಗೆ ಅವಕಾಶ ಕಲ್ಪಿಸಲಾಗಿದೆ’ ಎಂದರು.

ಇಲಾಖೆ ಕಾರ್ಯದರ್ಶಿ ಡಾ. ಸಲ್ಮಾ ಕೆ. ಫಾಹೀಮ್, ಆಯುಕ್ತೆ ಎಸ್. ಅಶ್ವಥಿ, ಹೆಚ್ಚುವರಿ ನಿರ್ದೇಶಕ ಡಾ. ಶ್ರೀನಿವಾಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.