ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಭಾನುವಾರ ಬೆಳಿಗ್ಗೆ ನಿಧನರಾದರು. 74 ವರ್ಷದ ಅವರಿಗೆ ಪತಿ ಹಾಗೂ ಮೂವರು ಮಕ್ಕಳಿದ್ದಾರೆ.

ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಸರೋಜಾ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಿಗ್ಗೆ ಕೊನೆಯುಸಿರೆಳೆದರು.

ಜೆಪಿ ನಗರದ ಸುದೀಪ್ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಟರಾದ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ಡಾಲಿ ಧನಂಜಯ, ನಟಿಯರಾದ ತಾರಾ, ರಕ್ಷಿತಾ ಪ್ರೇಮ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ಸಂಜೆ ವಿಲ್ಸನ್ ಗಾರ್ಡನ್ನಲ್ಲಿರುವ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.