ನಟಿ ಶ್ರುತಿ ಹರಿಹರನ್ ಪರವಾಗಿ ನಟ ಕಿಶೋರ್ ಬೆಂಬಲ ಘೋಷಿಸಿದ್ದಾರೆ.

‘ಶೂರ ಸಿಂಧೂರ ಲಕ್ಷ್ಮಣ’ ಚಿತ್ರದ ಸುದ್ದಿಗೋಷ್ಠಿ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನಗೆ ಅರ್ಜುನ್ ಸರ್ಜಾ ಅವರ ಮೇಲೆ ಅಪಾರ ಗೌರವವಿದೆ. ಅವರೊಟ್ಟಿಗೆ ಕೆಲಸ ಮಾಡಿದ್ದೇನೆ. ಆದರೆ, ಶ್ರುತಿ ಹರಿಹರನ್ ಮತ್ತು ಅರ್ಜುನ್ ಸರ್ಜಾ ಅವರ ನಡುವೆ ‘ವಿಸ್ಮಯ’ ಚಿತ್ರದ ಶೂಟಿಂಗ್ ವೇಳೆ ಏನು ನಡೆದಿದೆ ಎಂಬುದು ನನಗೆ ಗೊತ್ತಿಲ್ಲ. ಘಟನೆಯ ಸತ್ಯಾಸತ್ಯತೆಯ ಪರಿಶೀಲನೆ ನಡೆಯಲಿ. ಶ್ರುತಿ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅದು ಆಕೆಯ ಹಕ್ಕು. ನಮಗೆ ಕೇಳಿಸಿಕೊಳ್ಳುವ ತಾಳ್ಮೆ ಇರಬೇಕು. ಅದಕ್ಕೆ ಅಡ್ಡಿಪಡಿಸುವುದು ಸರಿಯಲ್ಲ’ ಎಂದು ಹೇಳಿದರು.

ಇದನ್ನೂ ಓದಿ:ಅರ್ಜುನ್ಕ್ಷಮೆ ಕೇಳುವುದು ದೊಡ್ಡತನ,ನಾನು ಶ್ರುತಿ ಹರಿಹರನ್ ಪರ:ಪ್ರಕಾಶ್ ರೈ

ಶ್ರುತಿ ಅವರ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಜನರು ಪ್ರತಿಕ್ರಿಯಿಸುತ್ತಿರುವ ರೀತಿ ಸರಿಯಲ್ಲ. ಆಕೆಯ ಚಾರಿತ್ರ್ಯಹರಣ ಮಾಡುವುದು ತಪ್ಪು. ಅಂತಹ ಸಂಸ್ಕೃತಿಯನ್ನು ಹುಟ್ಟುಹಾಕುವುದು ಒಳ್ಳೆಯದಲ್ಲ. ಜನರ ಟೀಕೆಗಳ ಬಗ್ಗೆ ನನ್ನ ವಿರೋಧವಿದೆ. ಅರ್ಜುನ್ ಸರ್ ಮೇಲೆ ನನಗೆ ಪ್ರೀತಿ ಇದೆ. ಈ ಪ್ರಕರಣದಿಂದ ಅವರಿಗೆ ಕೆಟ್ಟ ಹೆಸರು ಬರುವುದಿಲ್ಲ’ ಎಂದು ಅಭಿಪ್ರಾಯಪಟ್ಟರು.

ಕೆಲಸ ಮಾಡುವ ಸ್ಥಳದಲ್ಲಿ ಭಿನ್ನಾಭಿಪ್ರಾಯ ಬರುವುದು ಸಹಜ. ನಾವು ಮಾಡುವ ಕೆಲಸ ಕೆಲವರಿಗೆ ಸರಿ ಅನಿಸಬಹುದು. ಮತ್ತೊಬ್ಬರಿಗೆ ಅದು ತಪ್ಪು ಅನಿಸುತ್ತದೆ. ನೀನು ಯಾವುದೇ ಅಭಿಪ್ರಾಯವನ್ನು ಹೇಳಬಾರದು ಎಂದು ನಿರ್ಬಂಧಿಸುವುದು ತಪ್ಪು. ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಅದನ್ನು ಮೊಟಕುಗೊಳಿಸುವ ಅಧಿಕಾರ ಯಾರಿಗೂ ಇಲ್ಲ ಎಂದು ಪ್ರತಿಕ್ರಿಯಿಸಿದರು.

ಇವನ್ನೂ ಓದಿ...

ಶ್ರುತಿ #MeToo ಆರೋಪಕ್ಕೆ ‘ವಿಸ್ಮಯ’ ನಿರ್ದೇಶಕ ಅರುಣ್ ವೈದ್ಯನಾಥನ್ ಹೇಳಿದ್ದೇನು?

ನೋ ಎಂದ ಮೇಲೂ ಆ ರೀತಿ ಮಾಡಬಹುದಾ: ಶ್ರುತಿ ಹರಿಹರನ್

ಶ್ರುತಿ ಹರಿಹರನ್ #MeToo ಪತ್ರ: ಸಮಯ ಈಗ ಬಂದಿದೆ!

ಸ್ಯಾಂಡಲ್ವುಡ್ #MeToo: ಶ್ರುತಿ ಹರಿಹರನ್ಗೆ ಹಲವೆಡೆಯಿಂದ ಬೆಂಬಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.