‘ಶಿವಾಜಿ ಸುರತ್ಕಲ್’ ಸಿನಿಮಾ ಸರಣಿಯ ನಿರ್ಮಾಪಕ ಅನುಪ್ ಹನುಮಂತೇಗೌಡ ತಮ್ಮ ಮೂರನೇ ಸಿನಿಮಾ ನಿರ್ಮಾಣಕ್ಕೆ ಸಜ್ಜಾಗಿದ್ದಾರೆ. ಎಸ್.ಮಹೇಂದರ್ ಆ್ಯಕ್ಷನ್ ಕಟ್ ಹೇಳಲಿರುವ ಈ ಚಿತ್ರದಲ್ಲಿ ನಟ ಕಿಶೋರ್ ಮುಖ್ಯಭೂಮಿಕೆಯಲ್ಲಿರಲಿದ್ದಾರೆ.

ಚಿತ್ರಕ್ಕೆ ‘ಆಪರೇಷನ್ ಕೊಂಬುಡಿಕ್ಕಿ’ ಎಂಬ ಶೀರ್ಷಿಕೆ ಇಡಲಾಗಿದೆ. ‘ಸಿಲ್ವರ್ ಸ್ಕ್ರೀನ್ ಸ್ಟುಡಿಯೋಸ್’ ಎಂಬ ನಿರ್ಮಾಣ ಸಂಸ್ಥೆಯಡಿ ಈ ಸಿನಿಮಾವನ್ನು ಅನುಪ್ ನಿರ್ಮಾಣ ಮಾಡುತ್ತಿದ್ದಾರೆ. ‘ಕಂಠಿ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಹೆಜ್ಜೆ ಇಟ್ಟು, ಹಿಂದಿ ವೆಬ್ ಸರಣಿಯಲ್ಲೂ ನಟಿಸಿ ದಕ್ಷಿಣ ಭಾರತದ ಬೇಡಿಕೆಯ ನಟರಾಗಿರುವ ಕಿಶೋರ್ ಈ ಸಿನಿಮಾದ ನಾಯಕ. ‘ಕೆ.ಜಿ.ಎಫ್.’, ‘ಸಲಾರ್’ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ಛಾಯಾಚಿತ್ರಗ್ರಾಹಕರಾಗಿ ಕರುಣಾಕರ್, ದೀಪು ಎಸ್.ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.