ನವದೆಹಲಿ: ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ಅವರಿಗೆ ಸಂಬಂಧಿಸಿದ ಸುಲಿಗೆ ಪ್ರಕರಣದಲ್ಲಿ ಬಾಲಿವುಡ್ ನಟಿ ನೋರಾ ಫತೇಹಿ ಅವರು ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗದ ಮುಂದೆ ಗುರುವಾರ ವಿಚಾರಣೆಗೆ ಹಾಜರಾಗಿದ್ದಾರೆ.

ಸುಕೇಶ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ನಟಿಯ ಪಾತ್ರದ ಬಗ್ಗೆ ಮಾಹಿತಿ ಕಲೆ ಹಾಕಿರುವ ದೆಹಲಿ ಪೊಲೀಸರು, ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದರು.

ಸುಕೇಶ್‌ಗೆ ನೋರಾ ಅವರನ್ನು ಪರಿಚಯಿಸಿದ ಪಿಂಕಿ ಇರಾನಿ ಜೊತೆಯೇ ವಿಚಾರಣೆ ನಡೆದಿದೆ. ಬುಧವಾರ, ಪಿಂಕಿ ಇರಾನಿ ಜೊತೆಯಲ್ಲೇ ನಟಿ ಜಾಕ್ವೆಲಿನ್ ವಿಚಾರಣೆ ಸಹ ನಡೆದಿತ್ತು.

ದೆಹಲಿಯ ಮಂದಿರ್ ಮಾರ್ಗ್‌ನಲ್ಲಿರುವ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ತನಿಖಾ ವಿಭಾಗದೆದುರು ಇರಾನಿ ಮತ್ತು ಫತೇಹಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

‘ಮೊದಲಿಗೆ ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ನಡೆಸಿ, ಬಳಿಕ ಒಟ್ಟಿಗೆ ಪ್ರಶ್ನೆ ಮಾಡಲಾಗುತ್ತದೆ’ಎಂದು ಅವರು ಹೇಳಿದ್ದಾರೆ.

ಸೆಪ್ಟೆಂಬರ್ 2ರಂದು ನೋರಾ ಫತೇಹಿ ಅವರನ್ನು ಮೊದಲ ಬಾರಿಗೆ 6–7ಗಂಟೆ ವಿಚಾರಣೆ ನಡೆಸಿದ್ದ ಪೊಲೀಸರು, ಹೇಳಿಕೆ ದಾಖಲಿಸಿಕೊಂಡಿದ್ದರು. ಇದೀಗ, ಕೆಲವು ಉತ್ತರ ಸಿಗದ ಪ್ರಶ್ನೆಗಳು ಉದ್ಭವವಾಗಿರುವುದರಿಂದ ಮತ್ತೆ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಪಿಂಕಿ ಇರಾನಿ ನೀಡಿರುವ ಹೇಳಿಕೆಗಳಲ್ಲಿ ಕೆಲವು ವಿರೋಧಾಭಾಸಗಳು ಕಂಡುಬಂದಿವೆ. ಹೀಗಾಗಿ, ಇರಾನಿ ಮತ್ತು ನೋರಾ ಅವರನ್ನು ಒಟ್ಟಿಗೆ ವಿಚಾರಣೆ ನಡೆಸುವುದು ಮುಖ್ಯವಾಗಿದೆ. ಅಲ್ಲದೆ, ನೋರಾ ಅವರನ್ನು ಸುಕೇಶ್‌ಗೆ ಪರಿಚಯಿಸಿದ್ದರಲ್ಲಿ ಇರಾನಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಾಗಾಗಿ, ಕೆಲವು ಉತ್ತರ ಸಿಗದ ಪ್ರಶ್ನೆಗಳನ್ನು ಮುಂದಿಟ್ಟು, ಸ್ಪಷ್ಟನೆ ಪಡೆಯುವುದು ಮುಖ್ಯವಾಗಿದೆ’ಎಂದು ಅಧಿಕಾರಿ ಹೇಳಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇ.ಡಿ)ಸಹ ನೋರಾ ಫತೇಹಿ ವಿಚಾರಣೆ ನಡೆಸಿದೆ.

ಬುಧವಾರ, ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು 8 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿತ್ತು.

ಫೋರ್ಟಿಸ್ ಹೆಲ್ತ್‌ಕೇರ್ ಪ್ರವರ್ತಕ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಸೇರಿದಂತೆ ಹಲವರಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಕೇಶ್ ಚಂದ್ರಶೇಖರ್ ಸದ್ಯ ಜೈಲಿನಲ್ಲಿದ್ದಾರೆ.

ಸುಕೇಶ್ ಚಂದ್ರಶೇಖರ್ ಅವರಿಗೆ ಸಂಬಂಧಿಸಿದ ಬಹು ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಆಗಸ್ಟ್ 17ರಂದು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದು, ಅದರಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಹೆಸರನ್ನೂ ಉಲ್ಲೇಖಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆಗೆ ಹಾಜರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.