ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್, ಪುತ್ರಿ ಸುಹಾನ ಖಾನ್ ಹಾಗೂ ನಟಿ ನಯನತಾರಾ ಇಂದು (ಮಂಗಳವಾರ) ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ಅಟ್ಲೀ ನಿರ್ದೇಶನ ‘ಜವಾನ್‘ ಚಿತ್ರ ಸೆಪ್ಟೆಂಬರ್ 7ರಂದು ವಿಶ್ಚದಾದ್ಯಂತ ತೆರೆ ಮೇಲೆ ಬರಲಿದೆ. ಇದರ ಬೆನ್ನಲ್ಲೇ ಇಂದು ಮುಂಜಾನೆ ನಯನತಾರಾ ಹಾಗೂ ಪುತ್ರಿ ಸುಹಾನ ಅವರೊಂದಿಗೆ ಶಾರುಖ್ ತಿರುಪತಿಯ ವೆಂಕಟೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದಿದ್ದಾರೆ.

ಪ್ಯಾನ್ ಇಂಡಿಯಾ ಸಿನಿಮಾ ‘ಜವಾನ್‘ ಅನ್ನು ಗೌರಿ ಖಾನ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವು ಥ್ರಿಲ್ಲರ್ ಕಥಾಹಂದರವನ್ನು ಹೊಂದಿದೆ.

ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರಾ, ಗಿರಿಜಾ ಓಕ್, ಸಂಜೀತಾ ಭಟ್ಟಾಚಾರ್ಯ, ಲೆಹರ್ ಖಾನ್, ಆಲಿಯಾ ಖುರೇಷಿ, ರಿಧಿ ಡೋಗ್ರಾ, ಸುನಿಲ್ ಗ್ರೋವರ್ ಮತ್ತು ಮುಖೇಶ್ ಛಾಬ್ರಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ಜವಾನ್‘ ಚಿತ್ರವು ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ತೆರೆ ಕಾಣಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.