ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮತ್ತು ನಿರ್ದೇಶಕ ಉಪೇಂದ್ರ ಇದೇ ಮೊದಲ ಬಾರಿಗೆ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ವಿಚಾರಣೆ ಕುರಿತ ವಿಡಿಯೊ ಚಿತ್ರೀಕರಣ ಮತ್ತು ಅದು ಜನರಿಗೆ ನೋಡಲು ಸಿಗುವಂತಾಬೇಕು ಎಂದಿದ್ದಾರೆ.

ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ನ ವಿಚಾರಣೆಯ ವಿಡಿಯೊ ದಾಖಲೆ ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೊಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು ಎಂದಿದ್ಧಾರೆ.

ಉಪೇಂದ್ರ ಪೋಸ್ಟ್ನ ಪೂರ್ಣ ಮಾಹಿತಿ..

ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ರೇಣುಕಸ್ವಾಮಿ ಕೊಲೆ ಪ್ರಕರಣ, ದರ್ಶನ್ ಬಂಧನ ಮತ್ತು ಅದರ ವಿಚಾರಣೆಯನ್ನು ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ನ ವಿಚಾರಣೆಯಲ್ಲಿ ನಿಷ್ಪಕ್ಷವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಜನ ಕಾಯುತ್ತಿದ್ದಾರೆ. ರೇಣುಕಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿವೆ. ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ, ಯಾವುದೇ ಕೇಸ್ ಆದರೂ ಆ ಕೇಸ್ನ ವಿಚಾರಣೆಯ ವಿಡಿಯೊ ದಾಖಲೆ ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೊಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವಿಡಿಯೊ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು ). ಈ ಸಂಬಂಧ ಕಾನೂನು ಸುಧಾರಣೆಗಳು #CriminalJusticeReforms ಆಗಬೇಕು ಎಂದಿದ್ದಾರೆ.

ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ನ ವಿಚಾರಣೆಯ ವಿಡಿಯೊ ದಾಖಲೆಗಳ ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೊಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು/ ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು. ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ ಎಂದಿದ್ದಾರೆ.

ಆಗ ರೇಣುಕಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳ ಮನಸ್ಸಿನಲ್ಲಿ ಗೊಂದಲಗಳಿಲ್ಲದೆ ಪೊಲೀಸ್ ಮತ್ತು ಟಿವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.