ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಜೊತೆಯಾಗಿ ನಟಿಸಿರುವ ‘ಫಾರ್ ರಿಜಿಸ್ಟ್ರೇಷನ್’ ಚಿತ್ರದ ‘ಲವ್ಗಳ್ ಸುಮಧುರ ಹಾರ್ಟ್ಗಳ್ ಗಿರಗಿರ’ ಎಂಬ ಹಾಡು ಮೈಸೂರು ದಸರಾ ವೇದಿಕೆಯಲ್ಲಿ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನವೀನ್ ದ್ವಾರಕನಾಥ್ ನಿರ್ದೇಶನದ ಚಿತ್ರಕ್ಕೆ ನವೀನ್ ರಾವ್ ಬಂಡವಾಳ ಹೂಡಿದ್ದಾರೆ.

‘ಚಿತ್ರದಲ್ಲಿ 6 ಹಾಡುಗಳಿದ್ದು, ದಸರಾಗಾಗಿ ಒಂದು ವಿಶೇಷ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಸಿನಿಮಾ ಸೆನ್ಸಾರ್ ಹಂತದಲ್ಲಿದೆ. ನಟ ಪೃಥ್ವಿ ಅಂಬರ್ ವಿದೇಶ ಪ್ರವಾಸದಲ್ಲಿದ್ದು, ಮರಳಿ ಬಂದ ನಂತರ ಬಿಡುಗಡೆ ದಿನಾಂಕ ಘೋಷಿಸುತ್ತೇವೆ. ಈ ವರ್ಷವೇ ಸಿನಿಮಾ ತೆರೆಗೆ ಬರಲಿದೆ’ ಎಂದರು ನಿರ್ದೇಶಕ ನವೀನ್ ದ್ವಾರಕಾನಾಥ್.

ನಾಗಾರ್ಜುನ ಶರ್ಮ ಈ ಹಾಡನ್ನು ಬರೆದಿದ್ದು, ಆರ್.ಕೆ.ಹರೀಶ್ ಸಂಗೀತ ನೀಡಿದ್ದಾರೆ. ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನ ಚಿತ್ರಕ್ಕಿದೆ. ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.