ಬೆಂಗಳೂರು: ಸಿನಿಮಾ ಹಾಗೂ ಸಾಮಾಜಿಕ ಕೆಲಸಗಳ ಮೂಲಕ ಗುರುತಿಸಿಕೊಂಡಿರುವ ನಟಿ ಪ್ರಣೀತಾ ಕೊವೀಡ್ ಸಮಯದಲ್ಲಿ ಜನರಿಗೆ ನೆರವಾಗಿದ್ದಾರೆ.

ಲಸಿಕೆ ಅಭಿಯಾನ ದಿನದಂದು ಜಯನಗರದಲ್ಲಿ ಪ್ರಣೀತಾ ಪೌಂಡೇಶನ್ ಹಾಗೂ ರಾಷ್ಟ್ರೋತ್ಥಾನ ಪರಿಷತ್ ಉಚಿತವಾಗಿ ಲಸಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದವು

ತಮ್ಮ ಫೌಂಡೇಶನ್ ವತಿಯಿಂದ ಲಸಿಕೆ ಅಭಿಯಾನ ನಡೆಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.ಈ ಕುರಿತು ’ಕೊ’ ಮಾಡಿರುವ ಪ್ರಣೀತಾ ತಮ್ಮ ಫೌಂಡೇಶನ್ ನಿಂದ ನಡೆದ ಲಸಿಕೆ ಅಭಿಯಾನದ ವಿಡಿಯೋ ಹಂಚಿಕೊಂಡಿದ್ದಾರೆ.

ಹಲವರು ಈ ಅಭಿಯಾನದಲ್ಲಿ ಲಸಿಕೆ ಪಡೆದುಕೊಂಡಿದ್ದು, ಆ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಜನರು ಪ್ರಣೀತಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅಭಿಮಾನಿಗಳು ಫೋಟೊಗಳನ್ನು ಶೇರ್ ಮಾಡಿಕೊಂಡು ಸಂಭ್ರಮಿಸುತ್ತಿದ್ದಾರೆ.

ಈ ಹಿಂದೆ ವಿಷ್ಣುವರ್ಧನ್ ಓದಿದ ಶಾಲೆ ಶಾಶ್ವತವಾಗಿ ಮುಚ್ಚಿಹೋಗುವ ಸಂಗತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಪ್ರಣೀತಾ ಶಾಲೆ ಉಳಿಸಲು ನೆರವಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.