‘ಕೆ.ಜಿ.ಎಫ್’ ಸರಣಿ, ‘ಕಾಂತಾರ’ ಯಶಸ್ಸಿನ ಬೆನ್ನಲ್ಲೇ ಹೊಂಬಾಳೆ ಫಿಲ್ಮ್ಸ್ ಸಾಲು ಸಾಲು ಸಿನಿಮಾ ನಿರ್ಮಾಣಕ್ಕೆ ಇಳಿದಿದೆ. ಇದೀಗ ದೊಡ್ಮನೆಯ ಕುಡಿ ಯುವ ರಾಜ್‌ಕುಮಾರ್ ಅವರನ್ನು ‘ಯುವ’ ಸಿನಿಮಾ ಮೂಲಕ ಬೆಳ್ಳಿತೆರೆಗೆ ಹೊಂಬಾಳೆ ಪರಿಚಯಿಸಿದೆ.

ಇದೀಗ ಈ ‘ಯುವ’ ಚಿತ್ರಕ್ಕೆ ನಾಯಕಿಯಾಗಿ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅವರು ನಾಯಕಿಯಾಗಿ ಹೊರಹೊಮ್ಮಿದ್ದಾರೆ.

ಈ ವಿಷಯವನ್ನು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮೂಲಕ ತಿಳಿಸಿದೆ. ಈ ಚಿತ್ರಕ್ಕೆ ಸಪ್ತಮಿ ಪರ್ಫೆಕ್ಟ್ ಫಿಟ್ ಎಂದು ಹೇಳಿದೆ.

ಸಂತೋಷ್ ಆನಂದರಾಮ್ ಆ್ಯಕ್ಷನ್ ಕಟ್ ಹೇಳಲಿರುವ ‘ಯುವ’ ಸಿನಿಮಾದ ಮೂಲಕ ಹೀರೊ ಆಗಿ ಯುವ ಚಂದನವನಕ್ಕೆ ಹೆಜ್ಜೆ ಇಡಲಿದ್ದಾರೆ. ಚಿತ್ರದ ಶೀರ್ಷಿಕೆ ಘೋಷಣೆ ಮತ್ತು ಮುಹೂರ್ತ ಇತ್ತೀಚೆಗೆ ನಡೆಯಿತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಕ್ಯಾಮೆರಾಗೆ ಚಾಲನೆ ನೀಡಿದರೆ, ಚಿತ್ರದ ಮೊದಲ ದೃಶ್ಯಕ್ಕೆ ನಟ ಶಿವರಾಜ್‌ಕುಮಾರ್ ಕ್ಲ್ಯಾಪ್ ಮಾಡಿದರು. ಮುಹೂರ್ತದ ದಿನದಂದೇ ಚಿತ್ರದ ಬಿಡುಗಡೆ ದಿನಾಂಕವನ್ನೂ ಚಿತ್ರತಂಡ ಘೋಷಿಸಿದೆ.

2023ರ ಡಿ.22ರಂದು ಸಿನಿಮಾ ತೆರೆಕಾಣಲಿದೆ. ಚಿತ್ರದ ತಾರಾಗಣದ ಆಯ್ಕೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಘೋಷಿಸಲಾಗುವುದು ಎಂದಿದ್ದಾರೆ ಸಂತೋಷ್. ಹೊಂಬಾಳೆ ಜೊತೆ ಸಂತೋಷ್ ಅವರ ನಾಲ್ಕನೇ ಚಿತ್ರ ಇದಾಗಿದೆ. ಪುನೀತ್ ರಾಜ್‌ಕುಮಾರ್ ನಟನೆಯ ‘ರಾಜಕುಮಾರ’, ‘ಯುವರತ್ನ’, ಜಗ್ಗೇಶ್ ನಟನೆಯ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾವನ್ನೂ ಹೊಂಬಾಳೆ ನಿರ್ಮಾಣ ಮಾಡಿದೆ. ಇದು ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಎಂಟು ವರ್ಷದವಳಿದ್ದಾಗ ತಂದೆಯಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದೆ: ನಟಿ ಖುಷ್ಬೂ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.