ದಕ್ಷಿಣ ಭಾರತದ ಖ್ಯಾತ ನಟಿತ್ರಿಷಾ ಕೃಷ್ಣನ್ ರಾಜಕೀಯ ಪ್ರವೇಶ ಮಾಡಲು ಮುಂದಾಗಿದ್ದು, ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ವರದಿಯಾಗಿದೆ.

ತ್ರಿಷಾ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದು ತಮಿಳುನಾಡು ಕಾಂಗ್ರೆಸ್ ಪಕ್ಷದ ಮೂಲಗಳು ಖಚಿತಪಡಿಸಿವೆ. ಈ ನಡುವೆ ತ್ರಿಷಾ ಡಿಎಂಕೆ ಅಥವಾ ಎಐಎಡಿಎಂಕೆ ಬಿಟ್ಟು ಕಾಂಗ್ರೆಸ್ ಪಕ್ಷ ಯಾಕೆ ಸೇರುತ್ತಿದ್ದಾರೆ ಎಂದು ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಸದ್ಯ ತ್ರಿಷಾಗೆ ಚಿತ್ರರಂಗದಲ್ಲಿ ಅವಕಾಶಗಳು ಕಡಿಮೆಯಾಗಿರುವುದಕ್ಕೆ ಅವರು ಪೂರ್ಣ ಪ್ರಮಾಣದಲ್ಲಿ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂದು ಎನ್ನಲಾಗಿದೆ. ಈಗಾಗಲೇ ಅವರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿ ಖ್ಯಾತರಾಗಿದ್ದಾರೆ. ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ.

ಇದನ್ನೂ ಓದಿ:₹200 ಕೋಟಿ ವಂಚನೆ ಪ್ರಕರಣ: ನಟಿ ಜಾಕ್ವೆಲಿನ್ ಆರೋಪಿ, ಇಂದು ಚಾರ್ಜ್ ಶೀಟ್ ಸಲ್ಲಿಕೆ

ತ್ರಿಷಾಗೆ ತಮಿಳುನಾಡಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಇರುವುದರಿಂದ ಅವರು ತಮ್ಮ ರಾಜಕೀಯ ಜೀವನವನ್ನು ಇಲ್ಲಿಂದಲೇ ಪ್ರಾರಂಭ ಮಾಡಲಿದ್ದಾರೆ. ಇನ್ನು ಕೆಲವು ದಿನಗಳಲ್ಲಿ ಕಾಂಗ್ರೆಸ್ ಸೇರುವ ಬಗ್ಗೆ ತ್ರಿಷಾ ಖಚಿತಪಡಿಸಲಿದ್ದಾರೆ. ರಾಹುಲ್ ಗಾಂಧಿ ತಮಿಳುನಾಡು ಪ್ರವಾಸ ಮಾಡುವ ಸಂದರ್ಭದಲ್ಲಿ ಅವರು ಪಕ್ಷಕ್ಕೆ ಸೇರಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ತಾಯಿಯಾಗುತ್ತಿರುವ ಸಂಭ್ರಮದಲ್ಲಿ ಬಿಪಾಶಾ ಬಸು: ‘ಬೇಬಿ ಬಂಪ್‘ ಫೋಟೊ ಹಂಚಿಕೊಂಡ ನಟಿ

ದಿವಂಗತ ಪುನೀತ್ ರಾಜ್‌ಕುಮಾರ್ ಅಭಿನಯದ ಪವರ್ ಸಿನಿಮಾದಲ್ಲಿ ನಟಿ ತ್ರಿಷಾ ನಟಿಸುವ ಮೂಲಕ ಕನ್ನಡಿಗರ ಗಮನ ಸೆಳೆದಿದ್ದರು. ಪುನೀತ್ ನಟಿಸಬೇಕಿದ್ದ ‘ದ್ವಿತ್ವ’ ಚಿತ್ರಕ್ಕೆ ತ್ರಿಷಾ ನಾಯಕಿಯಾಗಿ ಆಯ್ಕೆ ಆಗಿದ್ದರು. ಆದರೆ, ಸಿನಿಮಾ ಸೆಟ್ಟೇರುವ ಮೊದಲೇ ಪುನೀತ್ ನಿಧನ ಹೊಂದಿದರು. ಈ ಕಾರಣದಿಂದ ಸಿನಿಮಾ ಸೆಟ್ಟೇರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.