ಬೆಂಗಳೂರು: ಸ್ಯಾಂಡಲ್ವುಡ್ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನಟರಿಬ್ಬರು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಜೆಪಿ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸುದೀಪ್ ಮತ್ತು ದರ್ಶನ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಇತರ ಮುಖಂಡರು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ.

ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ.

ವಿಧಾನಸಭೆ ಚುನಾವಣೆ ಅಧಿಸೂಚನೆಗೆ ದಿನಗಣನೆ ಆರಂಭವಾಗಿದ್ದು, ಪ್ರಮುಖ ಮೂರು ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಕೊನೆ ಕ್ಷಣದ ಕಸರತ್ತು ಬಿರುಸುಗೊಂಡಿದೆ. ಮೊದಲ ಪಟ್ಟಿ ಪ್ರಕಟಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು, ಎರಡನೇ ಪಟ್ಟಿಗೆ ತಯಾರಿ ನಡೆಸಿದ್ದಾರಾದರೂ ಬಿಡುಗಡೆಯ ಧೈರ್ಯ ತೋರುತ್ತಿಲ್ಲ. ಮೊದಲ ಪಟ್ಟಿ ಸಿದ್ಧಪಡಿಸುವಲ್ಲಿ ಬಿಜೆಪಿ ಸಕ್ರಿಯವಾಗಿದೆ. ಪಟ್ಟಿ ಪ್ರಕಟಗೊಂಡರೆ ಟಿಕೆಟ್ ಸಿಗದಿದ್ದವರು ಅನ್ಯಪಕ್ಷಗಳಿಗೆ ಜಿಗಿಯಬಹುದು ಅಥವಾ ಬಂಡಾಯ ಭುಗಿಲೇಳಬಹುದೆಂಬ ಭಯ ಮೂರೂ ಪಕ್ಷದವರನ್ನು ಕಾಡತೊಡಗಿದೆ. ಹೀಗಾಗಿ, ಪಟ್ಟಿ ವಿಳಂಬವಾಗುವ ಸಾಧ್ಯತೆ ಇದೆ.

ಓದಿ... ನಟ ಕಿಚ್ಚ ಸುದೀಪ್ಗೆ ಬೆದರಿಕೆ: ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.