‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರ ಪ್ರಚಾರಕ್ಕಾಗಿ ಹೊಸ ಮಾರ್ಗ ಕಂಡುಕೊಂಡಿದೆ. ಅದಕ್ಕಾಗಿ ಶಿರಸಿಯಲ್ಲಿ ಅಡಿಕೆ ಸುಲಿಯುವ ಸ್ಪರ್ಧೆ ಹಮ್ಮಿಕೊಂಡಿದೆ.

ಉತ್ತರ ಕನ್ನಡ ಜಿಲ್ಲೆ ಯ ಶಿರಸಿ ಟಿ.ಎಸ್.ಎಸ್ ಅಡಿಕೆ ವ್ಯಾಪಾರ ಅಂಗಳದಲ್ಲಿ ಅಡಿಕೆ ವ್ಯಾಪಾರ ಸಂಘಟನೆಯ ಸಹಯೋಗದಲ್ಲಿ ಫೆ. 20ರಂದು ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಅಡಿಕೆ ಸುಲಿಯುವ ಸ್ಪರ್ಧೆ ನಡೆಯಲಿದೆ. ಸುಮಾರು 200ಕ್ಕೂ ಹೆಚ್ಚು ಸ್ಪರ್ಧಿಗಳು ಈಗಾಗಲೇ ಹೆಸರು ನೋಂದಾಯಿಸಿದ್ದಾರೆ. ವಿಜೇತರಿಗೆ ಬಹುಮಾನವೂ ಇದೆ. ಚಿತ್ರದ ನಾಯಕ ದಿಗಂತ್, ನಾಯಕಿ ಐಂದ್ರಿತಾ ರೇ, ರಂಜನಿ ರಾಘವನ್ ಹಾಗೂ ಚಿತ್ರತಂಡದ ಬಹುತೇಕ ಸದಸ್ಯರು ಅಂದು ಉಪಸ್ಥಿತರಿರುತ್ತಾರೆ.

‘ಚಿತ್ರದಲ್ಲಿ ದಿಗಂತ್ ಅಡಿಕೆ ಬೆಳೆಗಾರ. ಅಡಿಕೆ ಜೊತೆ ಪಾತ್ರದ ನಂಟಿದೆ. ಹೀಗಾಗಿ ಮಲೆನಾಡಿನ ಜೀವನಾಡಿಯಾದ ಅಡಿಕೆ ಸುಲಿಯುವ ಸ್ಪರ್ಧೆ ಆಯೋಜಿಸಲಾಗಿದೆ’ ಎನ್ನುತ್ತಾರೆ ನಿರ್ದೇಶಕ ವಿನಾಯಕ ಕೋಡ್ಸರ.

ಬಿ.ಜಿ. ಮಂಜುನಾಥ್ ಅವರು ಈ ಚಿತ್ರ ನಿರ್ಮಿಸಿದ್ದಾರೆ. ವಿನಾಯಕ ಕೋಡ್ಸರ ನಿರ್ದೇಶಿಸಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ದಿಗಂತ್, ಐಂದ್ರಿತ ರೆ, ರಜನಿ ರಾಘವನ್ ಇದ್ದಾರೆ. ರವೀಂದ್ರ ಜೋಶಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.