ಬೆಂಗಳೂರು: ಕಂಠೀರವ ಸ್ಟುಡಿಯೊದಲ್ಲಿ ನಟ ಅಂಬರೀಷ್ ಸ್ಮಾರಕವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೌರ್ಯ ವೃತ್ತದಿಂದ ಬಸವೇಶ್ವರ ವೃತ್ತದವರೆಗಿನ ರೇಸ್ಕೋರ್ಸ್ ರಸ್ತೆಗೆ ‘ರೆಬೆಲ್ ಸ್ಟಾರ್ ಡಾ.ಎಂ.ಎಚ್ ಅಂಬರೀಷ್ ರಸ್ತೆ’ ನಾಮಫಲಕವನ್ನು ಅನಾವರಣಗೊಳಿಸಿದರು.

‘ಕರ್ನಾಟಕದ ರೆಬಲ್ ಸ್ಟಾರ್, ಎಲ್ಲರ ಮನಸ್ಸನ್ನು ಗೆದ್ದಂತಹ ನೇರ ದಿಟ್ಟ ಅಂಬರೀಷ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

‘ರೇಸ್ ಕೋರ್ಸ್ ರಸ್ತೆಯಲ್ಲಿ ಅಂಬರೀಷ್ ಅತಿ ಹೆಚ್ಚು ಓಡಾಡಿದ್ದರು. ಎಲ್ಲ ಅಭಿಮಾನಿಗಳ ಒತ್ತಾಸೆ ಮೇರೆಗೆ ಅವರ ಹೆಸರನ್ನು ಇಟ್ಟಿದ್ದೇವೆ. ರೀಲ್ ಆ್ಯಂಡ್ ರಿಯಲ್ ಲೈಫ್ ಎರಡು ಒಂದೇ ಆಗಿದ್ದ ಅವರದ್ದು ನೇರ ವ್ಯಕ್ತಿತ್ವ. ಕಾವೇರಿ ವಿಚಾರ ಬಂದಾಗ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟವರು. ಅಧಿಕಾರ ಅವರನ್ನು ಹುಡುಕಿಕೊಂಡು ಹೋಗುತ್ತಿತ್ತು’ ಎಂದರು.

ಸಂಸದೆ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಷ್, ನಟ ರಾಘವೇಂದ್ರ ರಾಜ್ ಕುಮಾರ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಚಿನ್ನೇಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.