ಮುಂಬೈ:ಕೌನ್ ಬನೇಗಾ ಕರೋಡ್‌ಪತಿ(ಕೆಬಿಸಿ)ಯಲ್ಲಿಭಾಗವಹಿಸಿದ್ದ ಲೇಖಕಿ ಹಾಗೂ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಈ ಕಾರ್ಯಕ್ರಮ ನಡೆಸಿಕೊಡುವಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.

ಕೆಬಿಸಿಯ 11ನೇ ಅವೃತ್ತಿಯಲ್ಲಿ ಭಾಗವಹಿಸಿದ್ದ ಸುಧಾಮೂರ್ತಿ ದೇವದಾಸಿಯರು ತಯಾರಿಸಿದ್ದ ವಿಶೇಷ ಕೌದಿಯನ್ನು ಅಮಿತಾಬ್ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ. ಈ ವಿಷಯವನ್ನು ಅಮಿತಾಭ್‌ಅವರೇ ತಮ್ಮ ಬ್ಲಾಗ್‌ನಲ್ಲಿ ಬರೆದುಕೊಂಡಿದ್ದಾರೆ.

ನಾನು ಸಿನಿಮಾಗಳನ್ನು ನೋಡುತ್ತೇನೆ, ನಟರಾದ ಅಮಿತಾಭ್ ಬಚ್ಚನ್ ಅವರನ್ನು ಭೇಟಿಯಾಗಿದ್ದು ನನಗೆ ಸಂತೋಷವಾಗಿದೆ. ಈ ಕಾರ್ಯಕ್ರಮದಲ್ಲಿ ಸೋಲುವುದು, ಗೆಲ್ಲುವುದು ಮುಖ್ಯವಲ್ಲ, ನಮ್ಮ ಕೆಲಸಗಳ ಮೂಲಕ ಜನರನ್ನು ಮುಟ್ಟುವುದೇ ನಮ್ಮ ಉದ್ದೇಶವಾಗಿರಬೇಕು ಎಂದು ಅವರು ಹೇಳಿದ್ದಾರೆ.

ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವ ಸುಧಾಮೂರ್ತಿ ಅವರು ದೇವದಾಸಿಯರಿಗೆ ಹೊಸ ಬದುಕು ಕೊಟ್ಟಿದ್ದಾರೆ. ದೇವದಾಸಿಯರು ತಯಾರಿಸಿರುವ ಈ ಕೌದಿ ಸದಾ ನೆನಪಿನಲ್ಲಿ ಉಳಿಯುವ ಕಾಣಿಕೆಯಾಗಿದೆ ಎಂದು ಅಮಿತಾಭ್ ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.