‘ಕುತ್ತೆ ಕನ್ವರ್ ನಹಿ ಕನ್ವರ್‌ಲಾಲ್ ಬೋಲೊ’ ಈ ಡೈಲಾಗ್ ಕೇಳುತ್ತಿದ್ದಂತೆ ನೆನಪಾಗುವುದು ರೆಬಲ್ ಸ್ಟಾರ್ ಅಂಬರೀಶ್ ಅವರ ‘ಅಂತ’ ಸಿನಿಮಾ. ಮೇ 29 ರೆಬಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ಅಭಿನಯಿಸಿದ್ದ ಸೂಪರ್ ಹಿಟ್ ಚಿತ್ರ ‘ಅಂತ’ ಸುಣ್ಣ, ಬಣ್ಣ ಬಳಿದುಕೊಂಡು ಮೇ 26ರಂದು ಮರು ಬಿಡುಗಡೆಯಾಗುತ್ತಿದೆ.

‘ನಲವತ್ತು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಈಗ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ. 1981 ಇಸವಿಯಲ್ಲಿ ಈ ಚಿತ್ರ ತೆರೆ ಕಂಡ ಚಿತ್ರವಿದು. ಈ ಚಿತ್ರವನ್ನು ಬೇರೆಯವರು ನಿರ್ದೇಶಿಸಬೇಕಿತ್ತು. ಆದರೆ ಪತ್ರಕರ್ತ ಎಂ.ಬಿ.ಸಿಂಗ್ ಅವರ ಮೂಲಕ ಕಥೆ ನನಗೆ ದೊರಕಿತು. ಪರಿಮಳ ಆರ್ಟ್ಸ್ ಮೂಲಕ ಮಾರುತಿ, ವೇಣು ಹಾಗೂ ಕೆ.ಸಿ.ಎನ್ ಚಂದ್ರಶೇಖರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು’ ಎಂದು ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಹಳೆಯ ದಿನಗಳನ್ನು ನೆನಪಿಸಿಕೊಂಡರು.

‘ಲಕ್ಷ್ಮೀ ಈ ಚಿತ್ರದ ನಾಯಕಿ. ವಜ್ರಮುನಿ, ಸುಂದರಕೃಷ್ಣ ಅರಸ್, ಮುಸುರಿ ಕೃಷ್ಣಮೂರ್ತಿ, ಪ್ರಭಾಕರ್ ಮುಂತಾದವರು ಇದರಲ್ಲಿ ನಟಿಸಿದ್ದಾರೆ. ಇಡೀ ಚಿತ್ರದ ಚಿತ್ರೀಕರಣ ಮೈಸೂರಿನಲ್ಲೇ ನಡೆದಿದೆ. ಹದಿನೆಂಟು ಅದ್ದೂರಿ ಸೆಟ್ ಹಾಕಲಾಗಿತ್ತು. ‘ಅಂತ’ ನಿರೀಕ್ಷೆಗೂ ಮೀರಿದ ಯಶಸ್ಸು ಗಳಿಸಿತ್ತು’ ಎಂದು ಸಿಂಗ್ ವಿವರಿಸಿದರು.

‘ಅಂಬರೀಶ್ 71ನೇ ಹುಟ್ಟುಹಬ್ಬದ ಸಂದರ್ಭದಲ್ಲಿ 70ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ ಮಾಡುತ್ತಿದ್ದೇವೆ. ಜಯಣ್ಣ ಫಿಲಂಸ್ ಅವರು ಬಿಡುಗಡೆ ಮಾಡುತ್ತಿದ್ದಾರೆ. ಚಿತ್ರದ ಗುಣಮಟ್ಟ, ಧ್ವನಿ, ಕಲರಿಂಗ್ ಎಲ್ಲವನ್ನೂ ಈಗಿನ ರೀತಿಗೆ ಬದಲಿಸಲಾಗಿದೆ’ ಎಂದು ನಿರ್ಮಾಪಕ ವೇಣು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.