ಬೆಂಗಳೂರು: ಅಚ್ಚ ಕನ್ನಡದ ನಿರೂಪಕಿ ಎಂದೇ ಹೆಸರು ಪಡೆದಿದ್ದ ನಟಿ ಅಪರ್ಣಾ (57) ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ಖಚಿತಪಡಿಸಿವೆ.

ಈ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಎದೆ ತುಂಬಿ ಹಾಡುವೆನು, ಆಲ್ ಇಂಡಿಯಾ ರೆಡಿಯೊ ಸೇರಿದಂತೆ ಹಲವೆಡೆ ನಿರೂಪಕಿಯಾಗಿದ್ದ ಅಪರ್ಣಾ, ಮಸಣದ ಹೂವು ಚಿತ್ರದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ್ದರು.

ಕಿರುತರೆಯಲ್ಲಿಯೂ ಮಿಂಚಿದ್ದ ನಟಿ ಮುಕ್ತ– ಮುಕ್ತ , ಮೂಡಲ ಮನೆ ಸೇರಿ ಹಲವು ಧಾರಾವಾಹಿಗಳಲ್ಲೂ ಕಾಣಿಸಿಕೊಂಡಿದ್ದರು.

ಸರ್ಕಾರಿ ಕಾರ್ಯಕ್ರಮಗಳಲ್ಲಿ, ದೂರದರ್ಶನದಲ್ಲಿ ನಿರೂಪಕಿಯಾಗಿದ್ದರು.

ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನ ನಮ್ಮ ಮೆಟ್ರೊದಲ್ಲಿ ಹಿನ್ನೆಲೆ ಧ್ವನಿ ನೀಡುವ ಮೂಲಕ ಖ್ಯಾತಿ ಗಳಿಸಿದ್ದರು.

ಅಪರ್ಣಾ ಅವರಿಗೆ ಪತಿ ನಾಗರಾಜ ವಸ್ತಾರೆ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.